Publish Date: Fri, 14 Jul 2023 (14:00 IST)
Updated Date: Fri, 14 Jul 2023 (15:37 IST)
ವರ್ಗಾವಣೆ ದಂಧೆ ವಿಚಾರಕ್ಕೆ ರಾಜ್ಯ ಬಿಜೆಪಿ, ಕಾಂಗ್ರೆಸ್ ಸರ್ಕಾರವನ್ನು ಟೀಕೆ ಮಾಡಿದೆ.. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ವರ್ಗಾವಣೆ ದಂಧೆಗೆ ಸಂಬಂಧಿಸಿದಂತೆ, ರಾಜ್ಯದ ಎಟಿಎಂ ಸರ್ಕಾರದೊಳಗೆ ನಡೆಯುತ್ತಿದ್ದ ಆಂತರಿಕ ಸಮರಕ್ಕೆ ಮಹತ್ತರ ಸಾಕ್ಷಿ ಲಭಿಸಿದೆ. ಎಲ್ಲಾ ಸಚಿವರ ಖಾತೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದ ಶಾಡೋ ಸಿಎಂ ಯತೀಂದ್ರ, ಡಿಸಿಎಂ ಡಿ.ಕೆ ಶಿವಕುಮಾರ್ರವರ ಖಾತೆಗಳಲ್ಲಿಯೂ ಹಸ್ತಕ್ಷೇಪ ಮಾಡಿದ ಪರಿಣಾಮವೇ ಇದು ಇರಬಹುದು ಎಂದು ಟ್ವೀಟ್ ಮಾಡಿ ಕಾಲೆಳೆದಿದೆ. ಈ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಪುಷ್ಠಿ ನೀಡಿದೆ.