Select Your Language

Notifications

webdunia
webdunia
webdunia
webdunia

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ– ಯಡಿಯೂರಪ್ಪ

ಯಡಿಯೂರಪ್ಪ
ದಾವಣಗೆರೆ , ಸೋಮವಾರ, 15 ಜನವರಿ 2018 (14:43 IST)
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ನಡೆದ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಕೃಷಿ ಮತ್ತು ನೀರಾವರಿಗೆ ಆದ್ಯತೆ ನೀಡಲಾಗುತ್ತದೆ. ನೀರಾವರಿ ಯೋಜನೆಗಳಿಗೆ ಒಂದು ಲಕ್ಷ ಕೋಟಿ ಅನುದಾನ ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ನೀರಾವರಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಕೃಷಿಗೆ ಪ್ರೋತ್ಸಾಹ ಕಲ್ಪಿಸಬೇಕಾಗಿದೆ. ರೈತರ ಅಭಿವೃದ್ದಿಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸುವುದು ಕೂಡ ಅಗತ್ಯವಾಗಿದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

11ರ ಬಾಲೆಯ ಕೊಲೆಗೈದು ಅತ್ಯಾಚಾರ ಎಸಗಿದರು