Publish Date: Sat, 11 May 2024 (19:05 IST)
Updated Date: Sat, 11 May 2024 (19:09 IST)
ಮೈಸೂರು: ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆಗೆ ನಾವು ಮೈತ್ರಿ ಮುಂದುವರೆಸುತ್ತೇವೆ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಗೆ 2 ಸ್ಥಾನ ಬಿಟ್ಟುಕೊಟ್ಟು ಬಿಜೆಪಿ 4 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತೇವೆ. ಇದುವರೆಗೂ ಯಾವ ಕ್ಷೇತ್ರ ಜೆಡಿಎಸ್‌ಗೆ ಬಿಟ್ಟುಕೊಡುವುದರ ಬಗ್ಗೆ ತೀರ್ಮಾನಿಸಿಲ್ಲ.
ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಈ ಬಗ್ಗೆ ಹೇಳಲಿದ್ದಾರೆ ಎಂದರು.
ಈ ವೇಳೆ ಕರ್ನಾಟಕದ ಕಾಂಗ್ರೆಸ್ ಸರ್ಕಾರವನ್ನು ಆಗ್ರಹಿಸಿ, ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಕೆರೆ-ಕಟ್ಟೆಗಳು ಬತ್ತಿ ಹೋಗಿವೆ. ಬರಗಾಲ ಜನರನ್ನು ಕಿತ್ತು ತಿನ್ನುತ್ತಿದೆ. ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಒತ್ತಾಯಿಸಿದರು.
ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು, ಮೋದಿ ಮತ್ತೇ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.