Publish Date: Fri, 17 Mar 2017 (12:58 IST)
Updated Date: Fri, 17 Mar 2017 (13:01 IST)
ಇವರ ಅಪ್ಪನಾಣೆ ಇವರು ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿಯವರು ರಾಜ್ಯವನ್ನು ಲೂಟಿ ಮಾಡಿದ ಜನರು. ಜನರು ಎಲ್ಲವನ್ನು ನೋಡುತ್ತಿದ್ದಾರೆ. ಇವರಿಗೆ ಬುದ್ದಿ ಕಲಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸಭೆಯಲ್ಲಿ ಚುನಾವಣೆಗಾಗಿ ಬಿಜೆಪಿಯವರು ಧರಣಿ ಮುಂದುವರಿಸಿದ್ದಾರೆ. ಇವರನ್ನು ರಾಜ್ಯದ ಜನತೆ ನಂಬುವುದಿಲ್ಲ. ಇವರಲ್ಲಿ ಬಹಳಷ್ಟು ಜನ ಜೈಲಿಗೆ ಹೋಗಿ ಬಂದಿದ್ದಾರೆ ಎಂದು ವ್ಯಂಗ್ಯವಾಡಿದರು
ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಬಿಜೆಪಿಯವರು ತಿಪ್ಪರಲಾಗಾ ಹಾಕಿದರೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಬಿಜೆಪಿ ಮುಂಖಂಡರ ಬಗ್ಗೆ ಜನತೆಗೆ ವಿಶ್ವಾಸ ಉಳಿದಿಲ್ಲ ಎಂದು ಕಿಡಿಕಾರಿದ್ದಾರೆ.
ಜೆಡಿಎಸ್‌ನವರು ಬರಗಾಲ ಬಗ್ಗೆ ಸಿದ್ದರಾಗಿದ್ದಾರೆ. ನಾವು ಸಹ ಚರ್ಚೆಗೆ ಸಿದ್ದರಿದ್ದೇವೆ. ಆದರೆ, ಯಾವ ವಿಷಯದ ಬಗ್ಗೆ ಚರ್ಚೆ ನಡೆಸಬೇಕು ಎನ್ನುವ ಬಗ್ಗೆ ಸ್ಪೀಕರ್ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.