Select Your Language

Notifications

webdunia
webdunia
webdunia
webdunia

ಬಿಜೆಪಿ 50 ಸ್ಥಾನಗಳನ್ನೂ ಗೆಲ್ಲೋದಿಲ್ಲ: ಸಿಎಂ ಸಿದ್ದರಾಮಯ್ಯ

ಬಿಜೆಪಿ 50 ಸ್ಥಾನಗಳನ್ನೂ ಗೆಲ್ಲೋದಿಲ್ಲ: ಸಿಎಂ ಸಿದ್ದರಾಮಯ್ಯ
ಆಳಂದ: , ಭಾನುವಾರ, 13 ಆಗಸ್ಟ್ 2017 (16:08 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ಮಿಷನ್ 150 ಎನ್ನುವ ಭ್ರಮೆಯಲ್ಲಿದೆ. ಮುಂಬರುವ ಚುನಾವಣೆಯಲ್ಲಿ 50 ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಅಮಿತ್ ಶಾಗೆ ರಣತಂತ್ರ ಮಾಡಲು ಆಗುವುದಿಲ್ಲ. ಕೇವಲ ಕ್ರಿಮಿನಲ್ ಆಕ್ಟಿವಿಟಿ ಮಾಡಬೇಕು ಅಷ್ಟೆ. ಪಂಜಾಬ್‌ನಲ್ಲಿ ಅವರ ರಣತಂತ್ರ ಯಾಕೆ ಯಶಸ್ವಿಯಾಗಲಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಭ್ರಷ್ಟಾಚಾರ ಆರೋಪದಲ್ಲಿ ಜೈಲಿಗೆ ಹೋದವರನ್ನು ಪಕ್ಕದಲ್ಲಿ ಕುರಿಸಿಕೊಂಡು ನಮ್ಮ ವಿರುದ್ಧ ಭ್ರಷ್ಟಾಚಾರದ ಟೀಕೆ ಮಾಡುತ್ತಾರೆ ಎಂದು ಲೇವಡಿ ಮಾಡಿದ್ದಾರೆ. 
 
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಜನವಿರೋಧಿ, ರೈತ ವಿರೋಧಿ ಸರಕಾರವಾಗಿದೆ. ರಾಜ್ಯದಲ್ಲಿ ಜನತೆ ಯಾವುದೇ ಕಾರಣಕ್ಕೂ ಬಿಜೆಪಿಗೆ ಮತ ಹಾಕುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಎಚ್‌.ವೈ ಮೇಟಿ ಸಿಡಿ ಪ್ರಕರಣ ಸಂತ್ರಸ್ಥೆ ಆತ್ಮಹತ್ಯೆಗೆ ಯತ್ನ