Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಮತ್ತೆ ಬಿಜೆಪಿಗೆ ಅಧಿಕಾರ: ಅರುಣ್ ಸಿಂಗ್

webdunia
ಸೋಮವಾರ, 30 ಆಗಸ್ಟ್ 2021 (20:06 IST)
ಬೆಂಗಳೂರು: ಕರ್ನಾಟಕದ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ
ಮತ್ತು ಕರ್ನಾಟಕದ ಉಸ್ತುವಾರಿಗಳೂ ಆದ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.
ನಾಲ್ಕು ದಿನಗಳ ರಾಜ್ಯ ಭೇಟಿ ಹಿನ್ನೆಲೆಯಲ್ಲಿ ಆಗಮಿಸಿದ ಅವರು, ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದರು. ರಾಜ್ಯ ಸರಕಾರವು ಉತ್ತಮವಾಗಿ ಕೆಲಸ ಮಾಡುತ್ತಿದ್ದು, 2023ರಲ್ಲೂ ಅಧಿಕಾರ ಗಳಿಸಲಿದೆ ಎಂದರು.
ಮಂಡ್ಯ ಮತ್ತು ಮೈಸೂರಿನಲ್ಲಿ ಈ ಬಾರಿ ಪ್ರವಾಸ ಮಾಡುವುದಾಗಿ ಅವರು ತಿಳಿಸಿದರು. ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಶ್ರೀ ವಿಜಯೇಂದ್ರ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿದ್ದರಾಜು, ಪಕ್ಷದ ಪದಾಧಿಕಾರಿಗಳು, ಮುಖಂಡರು ಇದ್ದರು. 
 

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಮೀಟರ್ ರೀಡಿಂಗ್ ಬಂದ ಬೆಸ್ಕಾಂ ನೌಕರನಿಗೆ ಗೂಸಾ!