Select Your Language

Notifications

webdunia
webdunia
webdunia
webdunia

ಅಗತ್ಯ ಬಿದ್ದಂತೆ ಬಿಜೆಪಿಯವರು ಮಾತಾಡ್ತಾರೆ-ಲಕ್ಷ್ಮೀ ಹೆಬ್ಬಾಳ್ಕರ್

ಲಕ್ಷ್ಮೀ ಹೆಬ್ಬಾಳ್ಕರ್

geetha

ಹುಬ್ಬಳ್ಳಿ , ಸೋಮವಾರ, 19 ಫೆಬ್ರವರಿ 2024 (19:12 IST)
ಹುಬ್ಬಳ್ಳಿ-ಬಿಜೆಪಿಯವರು ಅಗತ್ಯ ಬಿದ್ದಂತೆ ಜಾತ್ಯತೀತತೆ ಬಗ್ಗೆ ಮಾತಾಡ್ತಾರೆ. ಕೈಮುಗಿದು ಒಳಗೆ ಬಾ ಅಥವಾ ಧೈರ್ಯವಾಗಿ ಪ್ರಶ್ನಿಸಿ ಅನ್ನೋದು ಎರಡು ಒಂದೇ.ವಿದ್ಯಾರ್ಥಿಗಳು ಶಾಲೆಗೆ ಬರೋದು ಜ್ಞಾನಾರ್ಜನೆಗಾಗಿ. ಜ್ಞಾನದಿಂದ ಆತ್ಮಬಲ ಹೆಚ್ಚುತ್ತೆ. ಇವೆರಡೂ ಪದಗಳು ತದ್ದಿರುದ್ದವಾದದ್ದಲ್ಲ. ಜ್ಞಾನ ದೇಗುಲಕ್ಕೆ ಜ್ಞಾನ ತೆಗೆದುಕೊಳ್ಳಲು ಬನ್ನಿ. ಆತ್ಮವಿಶ್ವಾಸ ಹೆಚ್ಚಿಸಿಕೊಂಡು ಧೈರ್ಯದಿಂದ ಜೀವನ ಸಾಗಿಸಿ. ಇದ್ರ ಬಗ್ಗೆ ನಾನು ಜಾಸ್ತಿ ಹೇಳಿದ್ರೆ ಪರ ವಿರುದ್ಧದ ಹೇಳಿಕೆಗಳು ಹೆಚ್ಚಾಗುತ್ತೆ ಎಂದು ಹೆಬ್ಬಾಳ್ಕರ್ ಹೇಳಿದ್ದಾರೆ.
 
ಧಾರವಾಡ ಲೋಕಸಭಾ ಕಾಂಗ್ರೆಸ್ ಟಿಕೆಟ್ ವಿಚಾರದ ಬಗ್ಗೆ ಹೆಬ್ಬಾಳ್ಕರ್ ಮಾತನಾಡಿದ್ದು, ಶೀಘ್ರವೇ ಅಭ್ಯರ್ಥಿಯ ಹೆಸರು ಅಂತಿಮವಾಗಲಿದೆ. ನಮ್ಮ ಎದುರಾಳಿ ಪ್ರಹ್ಲಾದ್ ಜೋಶಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಜೋಶಿ ಹಿಂದೆ ನಾಲ್ಕು ಬಾರಿ ಆಯ್ಕೆಯಾದವರು ಮತ್ತು ಕೇಂದ್ರದಲ್ಲಿ ಸಚಿವರಾದವರು. ಅವರನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸೂಕ್ತ ಅಭ್ಯರ್ಥಿಯನ್ನು ಅಂತಿಮಗೊಳಿಸ್ತೇವೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೇಸಿಗೆ ಮುನ್ನವೇ ಬೆಂಗಳೂರಿನಲ್ಲಿ ನೀರಿನ ಕೊರತೆ