ವಿಧಾನ ಪರಿಷತ್‌ನ ನಾಲ್ಕೂ ಸ್ಥಾನಗಳೂ ಬಿಜೆಪಿ ಪಾಲು: ಕಟೀಲ್

Webdunia
ಗುರುವಾರ, 26 ಮೇ 2022 (22:13 IST)

ಧಾರವಾಡ: ಸದ್ಯ ನಾಲ್ಕು ಕ್ಷೇತ್ರಗಳಿಂದ ವಿಧಾನ ಪರಿಷತ್‌ಗೆ ನಡೆದಿರುವ ಚುನಾವಣೆಯಲ್ಲಿ ಬಿಜೆಪಿ ನಾಲ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ ಕಟೀಲ್ ಹೇಳಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಈಗಾಗಲೇ ಬೆಳಗಾವಿಯಲ್ಲಿ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಧಾರವಾಡದಲ್ಲಿ ಸೋಲಿಲ್ಲದ ಸರದಾರ ಬಸವರಾಜ ಹೊರಟ್ಟಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಪ್ರಸಕ್ತ ವರ್ಷ ಬಿಜೆಪಿ ನಾಲ್ಕೂ ಸ್ಥಾನಗಳನ್ನು ಗೆಲ್ಲಲಿದೆ. ಹೀಗಾಗಿ ಮುಂದಿನ ತಂತ್ರಗಳ ಬಗ್ಗೆ ಚರ್ಚೆ ನಡೆಸಲು ಧಾರವಾಡಕ್ಕೆ ಬಂದಿದ್ದೇನೆ ಎಂದರು.

ನರೇಂದ್ರ ಮೋದಿ ಅವರು ಜಗತ್ತು ಮೆಚ್ಚಿದ ನಾಯಕರು. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂಬಂತೆ ಕೆಲಸ ಮಾಡುತ್ತಿದ್ದಾರೆ. ಭಾರತವನ್ನು ಇಂದು ಇಡೀ ವಿಶ್ವವೇ ತಿರುಗಿ ನೋಡುತ್ತಿದೆ. ಮೋದಿ ಅವರು ಅಭೂತಪೂರ್ವವಾದ ಕೆಲಸ ಮಾಡುತ್ತಿದ್ದಾರೆ ಎಂದರು.

ವಿಧಾನ ಪರಿಷತ್ ಚುನಾವಣೆ ಕಾರ್ಯವೈಖರಿಯೇ ಬೇರೆ, ವಿಧಾನಸಭೆ ಚುನಾವಣೆಯ ಕಾರ್ಯ ವೈಖರಿಯೇ ಬೇರೆ. ಈ ಚುನಾವಣೆ ವಿಧಾನ ಸಭೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ಇದ್ದರೂ ಅದನ್ನು ಮುಂದಿನ ದಿನಗಳಲ್ಲಿ ಸರಿಪಡಿಸುವಂತಹ ಕೆಲಸ ನಡೆಯುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಯವರು ಹವಾಮಾನ ವರದಿ ತಪ್ಪದೇ ಗಮನಿಸಿ

ಕೇಂದ್ರ ಜಾತಿಗಣತಿ ಮಾಡುವಾಗಲೂ ಬಿಜೆಪಿ ನಾಯಕರಿಗೆ ವಿರೋಧಿಸುವ ಧಮ್ ಇದ್ಯಾ: ಸಿದ್ದರಾಮಯ್ಯ

ಪಾಕಿಸ್ತಾನ ವಿರುದ್ಧ ಕ್ರಿಕೆಟ್ ಗೆದ್ದರೆ ಯುದ್ಧ ಗೆದ್ದಂತಾ: ಬಿಕೆ ಹರಿಪ್ರಸಾದ್ ವ್ಯಂಗ್ಯ

ಕರ್ನಾಟಕ ಜಾತಿ ಸಮೀಕ್ಷೆ ವಿರೋಧಿಸುತ್ತಿರುವ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ಬೆಂಗಳೂರಿನಲ್ಲಿ ಯಾವಾಗ ಜಾತಿಗಣತಿ ಆರಂಭ: ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments