Publish Date: Mon, 09 Dec 2019 (17:13 IST)
Updated Date: Mon, 09 Dec 2019 (17:15 IST)
ಉಪ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ವಿಜಯೋತ್ಸವ ನಡೆಯುತ್ತಿದೆ.
ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡರು ಬಿಜೆಪಿ ಗೆಲ್ಲುವ ನಿರೀಕ್ಷೆ ಇತ್ತು. ಇನ್ನು ಮುಂದೆ ಸುಭದ್ರವಾದ ಸರಕಾರ ಸಿಗಲಿದೆ. ಜನಪರ ಅಭಿವೃದ್ಧಿ ಕೆಲಸ ಮಾಡಲು ಶಕ್ತಿ ಸಿಕ್ಕಿದೆ ಎಂದು ಸಂಭ್ರಮಿಸಿದ್ದಾರೆ.