ಶಿವಮೊಗ್ಗ : ಮೂರು ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು  ಮೂರು ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
									
			
			 
 			
 
 			
					
			        							
								
																	
ಈಗಾಗಲೇ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ. ರಾಘವೇಂದ್ರ ಅವರು ನಾಮಪತ್ರ ಸಲ್ಲಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು,  ಶಿವಮೊಗ್ಗದಲ್ಲಿ ವಿರೋಧ ಪಕ್ಷದ ಅಭ್ಯರ್ಥಿ ಯಾರೇ ಆದರೂ ಸಹ ಬಿ.ವೈ. ರಾಘವೇಂದ್ರ ಅತಿ ಹೆಚ್ಚು ಮತಗಳ ಅಂತರದಿಂದ ಜಯ ಗಳಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
									
										
								
																	
ಬಳ್ಳಾರಿಯಲ್ಲಿ ಯಾವುದೇ ಬಂಡಾಯ ಇಲ್ಲ. ಸಣ್ಣ ಪುಟ್ಟ ವ್ಯತ್ಯಾಸಗಳಿದ್ದು ಅದು ಸರಿಯಾಗಲಿದೆ. ಜೆ.ಶಾಂತ ಈಗಾಗಲೇ ಒಂದು ಬಾರಿ ಸಂಸದರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಅವರು ಜಯಗಳಿಸಲಿದ್ದಾರೆ  ಎಂದು ಅವರು ತಿಳಿಸಿದ್ದಾರೆ.
									
											
							                     
							
							
			        							
								
																	
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ 
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.