ಉಪ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ

Webdunia
ಗುರುವಾರ, 18 ಅಕ್ಟೋಬರ್ 2018 (22:16 IST)
ಮುಂಬರುವ ಉಪ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಯೆಡಿಯೂರಪ್ಪ ಹೇಳಿದ್ದಾರೆ. ಉಪ ಚುನಾವಣೆ ಪ್ರಚಾರಕ್ಕೆ ಯಾವುದೇ ರಾಷ್ಟ್ರೀಯ ನಾಯಕರು ಭಾಗವಹಿಸುವುದಿಲ್ಲ  ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಹಿನ್ನಲೆಯಲ್ಲಿ ಬೈಂದೂರು  ನಲ್ಲಿ ಚುನಾವಣಾ ಪ್ರಚಾರ ಸಭೆ ಯಲ್ಲಿ ಭಾಗವಹಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಯೆಡಿಯೂರಪ್ಪ ಆಗಮಿಸಿದರು .ಬಳಿಕ ಬಜ್ಪೆ ಶಾರದಾ ಸಮಿತಿಯಿಂದ ನಡೆಯುವ ಶಾರದಾ ಮಹೋತ್ಸವದಲ್ಲಿ  ಪಾಲ್ಗೊಂಡು ಶಾರದಾ ಮಾತೆ ದರ್ಶನ ಪಡೆದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಯೆಡಿಯೂರಪ್ಪ ಮುಂಬರುವ ಲೋಕಸಭಾ ಹಾಗೂ ವಿಧಾನ ಸಭಾ ಚುನಾವಣೆಗೆ ಪಕ್ಷ ಈಗಾಗಲೇ ಪ್ರಚಾರ ಆರಂಭಿಸಿದೆ. ಆದರೆ ಚುನಾವಣಾ ಪ್ರಚಾರ ಸಭೆಯಲ್ಲಿ ರಾಷ್ಟ್ರೀಯ ನಾಯಕರು ಭಾಗವಹಿಸುವುದಿಲ್ಲ . ಬಿಜೆಪಿ ಉಪ ಚುನಾವಣೆ ನಡೆಯುವ ಎಲ್ಲಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ.ಕಾಂಗ್ರೆಸ್ ಜೆಡಿಎಸ್ ಮೈತ್ರಿ ಕೂಟಕ್ಕೆ ಹೀನಾಯ ಸೋಲು ಉಂಟಾಗಲಿದೆ ಎಂದು ಹೇಳಿದರು.

ಕೇಂದ್ರ ಸರಕಾರದ ಸಾಧನೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರದ ವೈಫಲ್ಯವನ್ನು ಜನರಿಗೆ ತಿಳಿಸಲಾಗುವುದು ಎಂದು ಹೇಳಿದರು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಬಿಜೆಪಿ ಮುಖಂಡರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಕ್ಯಾಪ್ಟನ್ ಬ್ರಜೇಶ್ ಚೌಟ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಮಾಡಿಸಿದ ಆನೆ, ಚಾರ್ಮಾಡಿಯಲ್ಲಿ ನಿಜವಾಗ್ಲೂ ಆಗಿದ್ದೇನು

Karnataka Weather: ಮುಂದಿನ 24 ಗಂಟೆಯ ಹವಾಮಾನ ಬದಲಾವಣೆ ಕೇಳಿದ್ರೆ ಶಾಕ್

ಮನೆ ಕಟ್ಟೋಣ ಎಂದು ವಿಚ್ಛೇಧಿತ ಮಹಿಳೆಗೆ ಕೈಕೊಟ್ಟ ಎರಡನೇ ಗಂಡ, ಆಗಿದ್ದೇನು ಗೊತ್ತಾ

ಕನ್ನಡ, ಕೇರಳ ಭಾಷಾ ವಿವಾದ: ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಪ್ರೀತಿ ತಿರಸ್ಕರಿಸಿದ ಯುವತಿಗೆ ಪಾಗಲ್ ಪ್ರೇಮಿಯ ಕಾಟ, ಕೊನೆಗೂ ವಶಕ್ಕೆ

ಮುಂದಿನ ಸುದ್ದಿ
Show comments