Publish Date: Mon, 04 Dec 2017 (10:05 IST)
Updated Date: Mon, 04 Dec 2017 (10:13 IST)
ಬಿಜೆಪಿ ಸಂಸದ ಪ್ರತಾಪಸಿಂಹ ಅವರ ಬಂಧನ ಖಂಡಿಸಿ ಬಿಜೆಪಿ ಕರೆ ನೀಡಿದ್ದ ಹುಣಸೂರು ಬಂದನ್ನು ವಾಪಸ್ ಪಡೆಯಲಾಗಿದೆ.
ಬಂದ್ ವಾಪಸ್ ಪಡೆದ ಹಿನ್ನೆಲೆಯಲ್ಲಿ ಎಂದಿನಂತೆ ದೈನಂದಿನ ಚಟುವಟಿಕೆಗಳು ಆರಂಭಗೊಂಡಿವೆ. ಬೆಳಿಗ್ಗೆ ಕೆಲವೆಡೆ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿತ್ತು.
ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಹುಣಸೂರು ಬಂದ್ ವಾಪಸ್ ಪಡೆಯಲಾಗಿದೆ ಎಂದು ಮೈಸೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವಣ್ಣ ಹೇಳಿದ್ದಾರೆ.
ಹನುಮ ಜಯಂತಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಪ್ರತಾಪಸಿಂಹ ಅವರು ಹುಣಸೂರಿಗೆ ಬಂದಿದ್ದಾಗ ಬಂಧಿಸಲಾಗಿತ್ತು. ಇದನ್ನು ಖಂಡಿಸಿ ಹುಣಸೂರು ಬಂದ್ ಕರೆನೀಡಲಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.