ಸದನದಲ್ಲಿ ಗ್ಯಾರಂಟಿಗಳ ಕುರಿತು ಚರ್ಚೆಗೆ ಅವಕಾಶ ನೀಡುವುದಾಗಿ ಸ್ಪೀಕರ್ ಭರವಸೆ ನೀಡಿದ ಹಿನ್ನೆಲೆ, ವಿಧಾನಸಭೆ ಕಲಾಪದಲ್ಲಿ ಬಿಜೆಪಿ ಶಾಸಕರು ಧರಣಿ ವಾಪಸ್ ಪಡೆದಿದ್ದಾರೆ. ಇಂದು ಸದನದ ಒಳಗೆ, ಹೊರಗೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಧರಣಿ ನಡೆಸಲು ತೀರ್ಮಾನಿಸಿದ್ದರು.. ಇಂದು ಎಚ್ಚೆತ್ತ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಚರ್ಚೆಗೆ ಅವಕಾಶ ನೀಡಿದ್ದಾರೆ.ನಿನ್ನೆ ಬಿಜೆಪಿ ನಾಯಕರು ಹಲವಾರು ವಿಚಾರಗಳನ್ನು ಮುಂದಿಟ್ಟುಕೊಂಡು ಧರಣಿ ನಡೆಸಿದ್ದರು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ಯಾವುದೇ ಷರತ್ತಿಲ್ಲದೆ ಅನುಷ್ಠಾನಗೊಳಿಸಬೇಕು, ಮತಾಂತರ ನಿಷೇಧ ಕಾಯ್ದೆ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳನ್ನು ವಾಪಸ್ ಪಡೆಯುವ ನಿರ್ಧಾರ ಕೈಬಿಡಬೇಕು ಎಂದು ಒತ್ತಾಯಿಸಿ ವಿಧಾನಮಂಡಲದ ಉಭಯ ಸದನಗಳ ಒಳಗೆ ಹಾಗೂ ಹೊರಗೆ ನಿನ್ನೆ ದಿನವಿಡೀ ಪ್ರತಿಭಟನೆ ನಡೆಸಿದ್ದರು.