Publish Date: Fri, 29 Mar 2024 (19:00 IST)
Updated Date: Fri, 29 Mar 2024 (19:45 IST)
ಮೈಸೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ತಾನಗಳಲ್ಲಿ ಗೆಲ್ಲುವುದಿಲ್ಲ. ಆದರೆ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆಯಾಗುತ್ತಾರೆಂದು ಕಾದಂಬರಿಕಾರ ಎಸ್.ಎಲ್.ಭೈರಪ್ಪ ಹೇಳಿದರು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶುಕ್ರವಾರ ಇಲ್ಲಿನ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ನಂತರ ಅವರು ಮಾಧ್ಯಮದ ಮುಂದೆ ಮಾತನಾಡಿದರು.
ಎಲ್ಲವನ್ನೂ ಉಚಿತವಾಗಿ ಕೊಡುತ್ತಿರುವುದರಿಂದ ಸರ್ಕಾರದಲ್ಲಿ ಹಣವೇ ಇಲ್ಲದಂತಾಗಿದೆ. ಹೀಗಾಗಿಯೇ ಕೇಂದ್ರದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಕೇಂದ್ರದಿಂದ ಕೊಟ್ಟಿದ್ದನ್ನೆಲ್ಲಾ ಖರ್ಚು ಮಾಡಿಕೊಂಡಿರುತ್ತಾರೆ. ಈಗ, ವಿತ್ತ ಸಚಿವರನ್ನು ಬೈಯ್ಯುತ್ತಿದ್ದಾರೆ. ಭಾಷೆಯನ್ನು ಗೌರವಯುತವಾಗಿ ಬಳಸುತ್ತಿಲ್ಲ. ಟೀಕಿಸುತ್ತಿರುವ ಸಂಸ್ಕೃತಿ ಸರಿ ಇಲ್ಲಎಂದು ದೂರಿದರು.
ಇನ್ನೂ ಉತ್ತರ ರಾಜ್ಯಗಳಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಪಡೆಯಲಿದೆ. ಪ್ರಸ್ತುತ ಕಾಂಗ್ರೆಸ್ ರಾಜ್ಯದಲ್ಲಿ ಗಟ್ಟಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.