ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣ ಎಲ್ಲರೂ ತಲೆತಗ್ಗಿಸುವಂತದ್ದು ಎಂದು ಮಾಜಿ ಗೃಹ ಸಚಿವ, ಶಾಸಕ ಅರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಈ ವಿಚಾರವಾಗಿ ವಿಧಾನಸೌಧದಲ್ಲಿಂದು ಪ್ರತಿಕ್ರಿಯಿಸಿದ ಅವರು, ಬಿಜೆಪಿ ಕಾರ್ಯಕರ್ತೆಯಾಗಿರುವ ಸುಜಾತ ಮೇಲೆ ನಡೆದಿರುವ ದೌರ್ಜನ್ಯ ಅಮಾನುಷವಾದದ್ದು. ಇನ್ನೂ ಸುಪ್ರೀಂಕೋರ್ಟ್ ಆದೇಶದಲ್ಲಿ ಮಹಿಳೆಯ ಬಂಧನ ವಿಚಾರವಾಗಿ ನಿಯಮವಿದ್ದು, ಇದೀಗ ಬಿಜೆಪಿ ಕಾರ್ಯಕರ್ತೆಯನ್ನು ಉಗ್ರರಂತೆ ಬಂಧನ ಮಾಡಲಾಗಿದೆ. ಈ ನಡವಳಿಕೆ ಸರಿಯಲ್ಲ ಎಂದು ಕಿಡಿಕಾರಿದರು.
ಕಾಂಗ್ರೆಸ್ ಕಾರ್ಪೋರೇಟರ್ ಸ್ಟೇಷನ್ ಹೋಗಿದ್ದಾರೆ. ಇದೆಲ್ಲವೂ ಅನುಮಾನಕ್ಕೆ ಕಾರಣವಾಗಿದೆ ಎಂದರು.
ಪೊಲೀಸ್ ವರಿಷ್ಠಾಧಿಕಾರಿ ಮೊದಲೇ ಹೇಳಿಕೆ ಕೊಟ್ಟು ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಹುಬ್ಬಳ್ಳಿ ಪೊಲೀಸ್ ಕಮೀಷನರ್ ತಮ್ಮ ಹೇಳಿಕೆ ವಾಪಸ್ ಪಡೆಯಬೇಕು. ಪೊಲೀಸರ ಕೃತ್ಯದ ಬಗ್ಗೆ ಸೂಕ್ತ ತನಿಖೆ ಆಗಬೇಕು. ತಪ್ಪು ಮಾಡಿರೋರ ಮೇಲೆ ಕ್ರಮ ಆಗಬೇಕು ಎಂದು ಆಗ್ರಹಿಸಿದರು.