ಬೆಂಗಳೂರು: ಈಚೆಗೆ ಬಿಜೆಪಿ ಸದಸ್ಯ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಬೆನ್ನಲ್ಲೇ ಕರ್ನಾಟಕದಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಫೇಸ್‌ಬುಕ್‌ನಲ್ಲಿ ವಿಡಿಯೋ ಮಾಡಿ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ಪ್ರವೀಣ್ ಗೌಡ ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರಿನ ನಾಗವಾರದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ನೆನಪು ಹಸಿಯಾಗಿರುವಾಗಲೇ ಬೆಂಗಳೂರು ನಗರ ಜಿಲ್ಲೆ ಆನೇಕಲ್ ನಲ್ಲೂ ಇಂತಹುದೇ ಮತ್ತೊಂದು ಪ್ರಕರಣ ವರದಿಯಾಗಿದೆ.
ಆತ್ಮಹತ್ಯೆಗೆ ಶರಣಾದ ಪ್ರವೀಣ್ ಗೌಡ ಬೇಲೂರು(35) ಎಂದು ಗುರುತಿಸಲಾಗಿದೆ. ಫೇಸ್ಬುಕ್ ವಿಡಿಯೋ ಮಾಡಿ ಹಲವರ ಹೆಸರುಗಳನ್ನು ಪ್ರಸ್ತಾಪಿಸಿರುವ ಪ್ರವೀಣ್, ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.