ಬಿಜೆಪಿ ಕಾರ್ಯಕರ್ತರಿಗೆ ಬಿ ವೈ ವಿಜಯೇಂದ್ರ ಸೆಕ್ಯುರಿಟಿ ಗಾರ್ಡ್ ಗಳದ್ದೇ ಕಾಟ

Krishnaveni K
ಸೋಮವಾರ, 5 ಆಗಸ್ಟ್ 2024 (10:54 IST)
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮೈಸೂರಿನತ್ತ ಪ್ರಯಾಣಿಸುತ್ತಿದ್ದಾರೆ. ಆದರೆ ಪಾದಯಾತ್ರೆ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಬಿ ವೈ ವಿಜಯೇಂದ್ರ ಬಾಡಿಗಾರ್ಡ್ ಗಳದ್ದೇ ಕಾಟವಾಗಿದೆ.

ಪಾದಯಾತ್ರೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಭಾಗಿಯಾಗಿದ್ದಾರೆ. ಕಳೆದ ಎರಡು ದಿನಗಳಿಂದ ಬಿ ವೈ ವಿಜಯೇಂದ್ರ ನಿರಂತರವಾಗಿ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಈ  ವೇಳೆ ದಾರಿಯುದ್ದಕ್ಕೂ ಸಾಕಷ್ಟು ಜನ  ಸೇರುತ್ತಿದ್ದಾರೆ. ತಮ್ಮ ಮೆಚ್ಚಿನ ನಾಯಕರನ್ನು ಭೇಟಿಯಾಗಲು ರಾಜಕೀಯ ನಾಯಕರ ಅಭಿಮಾನಿಗಳು ಪ್ರಯತ್ನ ಪಡುತ್ತಿದ್ದಾರೆ.

ಇದೇ ರೀತಿ ಪಾದಯಾತ್ರೆ ವೇಳೆ ಬಿಜೆಪಿ ಕಾರ್ಯಕರ್ತರು ತಮ್ಮ ನಾಯಕ ಬಿ ವೈ ವಿಜಯೇಂದ್ರರನ್ನು ಭೇಟಿ ಮಾಡಲು ಅವರ ಪಕ್ಕದಲ್ಲೇ ನಿಂತು ಹೆಜ್ಜೆ ಹಾಕಲು ಆಸೆಪಡುತ್ತಿದ್ದಾರೆ. ಇದಕ್ಕಾಗಿ ಅವರ ಹತ್ತಿರ ಬರಲು ಪ್ರಯತ್ನಿಸಿದರೂ ವಿಜಯೇಂದ್ರ ಸುತ್ತಮುತ್ತ ಇರುವ ಬಾಡಿಗಾರ್ಡ್ ಗಳು ಅದಕ್ಕೆ ಅವಕಾಶ ನೀಡುತ್ತಿಲ್ಲವಂತೆ.

ವಿಜಯೇಂದ್ರ ಹತ್ತಿರ ಹೋಗಲು ಪ್ರಯತ್ನಿಸಿದರೆ ಅವರ ಬಾಡಿ ಗಾರ್ಡ್ ಗಳು ತಳ್ಳಿ ಜನರನ್ನು ದೂರ ಸರಿಸುತ್ತಿದ್ದಾರೆ. ಅವರ ಹತ್ತಿರ ಹೋಗಲೂ ಬಿಡುತ್ತಿಲ್ಲ ಎಂಬುದು ಕಾರ್ಯಕರ್ತರ ಅಳಲು. ವಿಜಯೇಂದ್ರ ಜೊತೆ ಬೇರೆ ಹಲವು ನಾಯಕರೂ ಇರುವ ಕಾರಣಕ್ಕೆ ಭದ್ರತೆ ದೃಷ್ಟಿಯಿಂದ ಅಂಗರಕ್ಷಕರು ಈ ರೀತಿ ಮಾಡುತ್ತಿದ್ದಾರೆ. ಆದರೆ ಇದರಿಂದ ಕಾರ್ಯಕರ್ತರಿಗೆ ಬೇಸರವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments