Select Your Language

Notifications

webdunia
webdunia
webdunia
Tuesday, 8 April 2025
webdunia

ಸಿಎಂ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಸರಣಿ ಟ್ವೀಟ್

ಸಿಎಂ ಕುಮಾರಸ್ವಾಮಿ
ಬೆಂಗಳೂರು , ಶುಕ್ರವಾರ, 23 ನವೆಂಬರ್ 2018 (11:22 IST)
ಬೆಂಗಳೂರು: ರೈತರ ಸಾಲಮನ್ನಾ ವಿಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ರಾಜ್ಯ ಬಿಜೆಪಿ ಘಟಕ ಸಿಎಂ ಕುಮಾರಸ್ವಾಮಿ ಮತ್ತು ಸಮ್ಮಿಶ್ರ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮೂಲಕ ಟೀಕೆ ಮಾಡಿದೆ.

ನಿಜ ಹೇಳಿ ಕುಮಾರಣ್ಣ ಹ್ಯಾಷ್ ಟ್ಯಾಗ್ ಅಡಿಯಲ್ಲಿ ಸಿಎಂ ಕುಮಾರಸ್ವಾಮಿಗೆ ಹಲವು ಪ್ರಶ್ನೆಗಳನ್ನು ಬಿಜೆಪಿ ಮುಂದಿಟ್ಟಿದೆ. ರೈತರ ಸಾಲಮನ್ನಾ ಯಾವಾಗ ಮಾಡ್ತೀರಿ, ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗುತ್ತದೆ? ಬರಪೀಡಿತ 100 ತಾಲೂಕುಗಳಿಗೆ ವಿಶೇಷ ಅನುದಾನ ಯಾವಾಗ ಬಿಡುಗಡೆ ಮಾಡುತ್ತೀರಿ ಮತ್ತು ಸಾಮಾನ್ಯ ಕನಿಷ್ಠ ಯೋಜನೆ ಅನುಷ್ಠಾನ ಯಾವಾಗ ಆಗುತ್ತದೆ ಎಂಬ ಬಗ್ಗೆ ಬಿಜೆಪಿ ಸಿಎಂ ಕುಮಾರಸ್ವಾಮಿಗೆ ಪ್ರಶ್ನೆ ಮಾಡಿದೆ.

ಅಷ್ಟೇ ಅಲ್ಲದೆ, ಕಾಂಗ್ರೆಸ್ ದಯದಿಂದಾಗಿ ಆರು ತಿಂಗಳು ಅವಧಿ ಪೂರೈಸಿದ್ದೀರಿ. 184 ದಿನಗಳ ದುರಾಡಳಿತದಲ್ಲಿ ಸಚಿವ ಸಂಪುಟ ವಿಸ್ತರಣೆಯೇ ಆಗಿಲ್ಲ. ಇಡೀ ಆಡಳಿತವನ್ನು ತನ್ನ ಸುಪರ್ದಿಗೆ ಒಳಪಡಿಸುವ ನಿಮ್ಮ ದುರುದ್ದೇಶದಲ್ಲಿ ಯಾವಾಗ ಒಳ್ಳೆಯ ಆಡಳಿತದ ಭಾಗ್ಯ ನಮಗೆ ಸಿಗುತ್ತದೆ? ಎಂದು ಬಿಜೆಪಿ ಟೀಕಾ ಪ್ರಹಾರ ನಡೆಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಇನ್ಮುಂದೆ ಕಾಲೇಜಿಗೆ ಮೊಬೈಲ್, ಲ್ಯಾಪ್ ಟಾಪ್ ತರುವಂತಿಲ್ಲ!