ಬೆಂಗಳೂರು: ರಾಷ್ಟ್ರರಾಜಧಾನಿಯ ಕೇಂದ್ರ ಬಿಂದು, ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟ ನೋಡಿದಾಗ ಇದರಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ವಿಫಲ ಕಂಡುಬರುತ್ತದೆ ಎಂದು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಹೇಳಿದರು.
ಬೆಂಗಳೂರಿನಲ್ಲಿ ದೆಹಲಿ ಸ್ಫೋಟದ ಬಗ್ಗೆ ಪ್ರತಿಕ್ರಿಯಿಸಿದ ಅವರು,
ದೆಹಲಿ ಕೆಂಪು ಕೋಟೆ ಬಳಿ ಸಂಭವಿಸಿದ ಸ್ಪೋಟದಲ್ಲಿ ಸಾವನ್ನಪ್ಪಿ, ತನ್ನವರನ್ನು ಕಳೆದುಕೊಂಡ ಕುಟುಂಬಕ್ಕೆ ಆ ದೇವರು ನೋವನ್ನು ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ.
ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಎಲ್ಲೂ ಒಂದು ಕಡೆ ಭದ್ರತೆ ವಿಚಾರದಲ್ಲಿ ವಿಫಲವಾಗಿದೆ. ಪಹಲ್ಗಾಮ್ ಘಟನೆ ಬಳಿಕ ಹೆಚ್ಚಿನ ಎಚ್ಚರಿಕೆಯಿಂದ ಇರುತ್ತಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ.
ಇದರ ಹೊಣೆಯನ್ನು ಯಾರೂ ಹೊರಲು ಮುಂದೆ ಬರುತ್ತಿಲ್ಲ ಎಂದರು.