Daily Horoscope

Select Your Language

Notifications

webdunia
webdunia
webdunia
webdunia

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

BK Hariprasad
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ ಎಂಬ ವರದಿಗಳನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಬಿ. ಕೆ. ಹರಿಪ್ರಸಾದ್ ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಬೆಂಗಳೂರಿನ ಇಂದಿರಾ ಗಾಂಧಿ ಭವನದಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಅವರು ಸುದೀರ್ಘ ಪ್ರತಿಕ್ರಿಯೆ ನೀಡಿದರು.
 
"ಸಂಪುಟ ವಿಸ್ತರಣೆ ನಂತರ ನಮ್ಮ ಪಕ್ಷದಲ್ಲಿ ಯಾರಿಗೂ ಅಸಮಾಧಾನವಾಗಿಲ್ಲ. ಒಂದು ವೇಳೆ ಅಸಮಾಧಾನ ಯಾರಿಗಾದರೂ ಆಗಿದ್ದರೆ ಅದು ವಿಪಕ್ಷ ಬಿಜೆಪಿಯವರಿಗೆ ಮಾತ್ರ. ನಮ್ಮ ಶಾಸಕರು ಪಕ್ಷದ ಚೌಕಟ್ಟಿನಲ್ಲಿ ತಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರಷ್ಟೇ" ಎಂದು ಹರಿಪ್ರಸಾದ್ ಸ್ಪಷ್ಟಪಡಿಸಿದರು.
 
"ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಶೋಷಿತ ಸಮುದಾಯಗಳಿಗೆ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಈ ಪ್ರಮುಖ ತೀರ್ಮಾನದಲ್ಲಿ ಎಐಸಿಸಿ ಕಾರ್ಯದರ್ಶಿಗಳಾದ ಕೆ. ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರ ಸಮ್ಮತಿಯೂ ಇತ್ತು" ಎಂದರು.
 
"ಕಾಂಗ್ರೆಸ್ ಪಕ್ಷದಲ್ಲಿ ಅನುಭವೀ ನಾಯಕರ ಕೊರತೆಯೇ ಇಲ್ಲ, ನಮ್ಮಲ್ಲಿ 'ನಾಯಕತ್ವದ ಭಂಡಾರ'ವೇ ಇದೆ. ಬಿಜೆಪಿಯಂತೆ ನಾಯಕತ್ವದ ಅಭಾವ ನಮ್ಮಲ್ಲಿಲ್ಲ. ಒಟ್ಟು 140 ಶಾಸಕರ ಪೈಕಿ 48 ಜನರು ಮಾತ್ರ ಮೊದಲ ಬಾರಿಗೆ ಆಯ್ಕೆಯಾದವರಾಗಿದ್ದು, ಉಳಿದವರೆಲ್ಲರೂ 4 ರಿಂದ 5 ಬಾರಿ ಗೆದ್ದು ಬಂದಿರುವ ಹಿರಿಯ ಮತ್ತು ಅನುಭವೀ ನಾಯಕರಾಗಿದ್ದಾರೆ" ಎಂದು ವಿವರಣೆ ನೀಡಿದರು.
 
ಸಂಪುಟ ವಿಸ್ತರಣೆಯ ನಿರ್ಧಾರವು ಶೋಷಿತ ವರ್ಗಗಳಿಗೆ ನ್ಯಾಯ ಒದಗಿಸುವ ದೃಷ್ಟಿಯಿಂದ ಕೈಗೊಂಡ ತೀರ್ಮಾನವಾಗಿದ್ದು, ಪಕ್ಷದ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವವು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ