ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವೆ ಎಂದ ಬಿಕೆ ಸಂಗಮೇಶ: ಈ ಜನ್ಮದಲ್ಲೇ ಆಗಿ ಎಂದ ಅಶೋಕ್

Krishnaveni K
ಮಂಗಳವಾರ, 9 ಸೆಪ್ಟಂಬರ್ 2025 (17:50 IST)
Photo Credit: Instagram
ಬೆಂಗಳೂರು: ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವೆ ಎಂದು ಶಿವಮೊಗ್ಗದ ಭದ್ರವತಿ ಶಾಸಕ ಬಿಕೆ ಸಂಗಮೇಶ ಹೇಳಿದ್ದು ಇದಕ್ಕೆ ಬಿಜೆಪಿ ನಾಯಕರಾದ ಆರ್ ಅಶೋಕ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದು ಮುಂದಿನ ಜನ್ಮ ಯಾಕೆ ಈ ಜನ್ಮದಲ್ಲೇ ಆಗಿ ಬಿಡಿ ಎಂದು ಟಾಂಗ್ ಕೊಟ್ಟಿದ್ದಾರೆ.

ಬಿಕೆ ಸಂಗಮೇಶ ಹೇಳಿಕೆಗೆ ಭಾರೀ ಟೀಕೆ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್ ಅಶೋಕ್ ‘ಇಸ್ಲಾಂ ಧರ್ಮದಲ್ಲಿ ಪುನರ್ಜನ್ಮದ ಪರಿಕಲ್ಪನೆ ಇಲ್ಲ ಶಾಸಕ ಸಂಗಮೇಶ್ ಅವರೇ. ಇಸ್ಲಾಂ ಧರ್ಮದ ಮೇಲೆ ಅಷ್ಟು ಪ್ರೀತಿಯಿದ್ದರೆ ಈ ಜನ್ಮದಲ್ಲೇ ಮತಾಂತರ ಆಗಿಬಿಡಿ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೂ ಇಸ್ಲಾಂ ಧರ್ಮದ ಬಗ್ಗೆ ಬಹಳ ವ್ಯಾಮೋಹವಿದೆ. ಅವರನ್ನೂ ಸೇರಿಸಿಕೊಂಡು ಒಟ್ಟು 135 ಶಾಸಕರೂ ಸಾಮೂಹಿಕವಾಗಿ ಮತಾಂತರ ಆಗಿಬಿಡಿ’ ಎಂದು ವ್ಯಂಗ್ಯ ಮಾಡಿದ್ದಾರೆ.

ಇನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೂಡಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಅಷ್ಟೊಂದು ಪ್ರೀತಿಯಿದ್ದರೆ ಮುಂದಿನ ಜನ್ಮದವರೆಗೆ ಯಾಕೆ ಕಾಯಬೇಕು? ಈಗಲೇ ಮತಾಂತರ ಆಗಿ ಬಿಡಿ ಎಂದು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments