Publish Date: Mon, 12 Feb 2018 (09:30 IST)Updated Date: Mon, 12 Feb 2018 (09:36 IST)
ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಒತ್ತಾಯಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸಿಂಧನೂರಿನಲ್ಲಿ ದಲಿತಪರ ಸಂಘಟನೆಗಳ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ.
ರಾಹುಲ್ ಗಾಂಧಿ ಬಂದ ಬಸ್ಸಿಗೆ ಕಪ್ಪು ಬಾವುಟ ಪ್ರದರ್ಶಿಸಿದ ದಲಿತಪರ ಸಂಘಟನೆಗಳ ಕಾರ್ಯಕರ್ತರು ಬಸ್ ತಡೆದು ನಿಲ್ಲಿಸಿದರು. ರಾಹುಲ್ ಗಾಂಧಿ ವಿರುದ್ಧ ಘೋಷಣೆ ಕೂಗಿ ಬಸ್‌ನ ಮೇಲೆ ಕೆಲ ಕಾರ್ಯಕರ್ತರು ಕಪ್ಪು ಬಾವುಟ ತೂರಿದ ಘಟನೆ ನಡೆಯಿತು.
ಕೂಡಲೇ ಪೊಲೀಸರು ಧಾವಿಸಿ ಕಾರ್ಯಕರ್ತರನ್ನು ಚದುರಿಸಿದರು. ಘಟನೆಗೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.