Webdunia - Bharat's app for daily news and videos

Install App

ಕಪ್ಪು ಹಣದಿಂದ ಮೆರೆಯುತ್ತಿರುವ ಜನಾರ್ದನ ರೆಡ್ಡಿಯನ್ನು ಬಿಜೆಪಿಯಿಂದ ಉಚ್ಚಾಟಿಸಿ: ಕಾಗೋಡು

Webdunia
ಮಂಗಳವಾರ, 15 ನವೆಂಬರ್ 2016 (17:51 IST)
ರಾಜ್ಯದ ಯಾವುದೇ ಪಕ್ಷದ ರಾಜಕಾರಣಿಗಳು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪುತ್ರಿ ವಿವಾಹಕ್ಕೆ ಹೋಗಬಾರದು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಆಗ್ರಹಿಸಿದ್ದಾರೆ.
 
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪ ಎದುರಿಸುತ್ತಿರುವ ಜನಾರ್ಧನ ರೆಡ್ಡಿ, ಪುತ್ರಿಯ ಅದ್ದೂರಿ ವಿವಾಹ ಮಾಡುವ ಮೂಲಕ ಹಣದ ಮದ ತೋರಿಸುವುದು ಒಳ್ಳೆಯದಲ್ಲ ಎಂದು ಕಿಡಿಕಾರಿದರು.
 
ಭ್ರಷ್ಟಾಚಾರ ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿರುವ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಕಪ್ಪು ಹಣದಲ್ಲಿ ಜನಾರ್ದನ ರೆಡ್ಡಿ ತಮ್ಮ ಪುತ್ರಿಯ ಅದ್ದೂರಿ ವಿವಾಹ ಮಾಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ. ಹೀಗಾಗಿ ರಾಜ್ಯದ ಯಾವುದೇ ಪಕ್ಷದ ರಾಜಕಾರಣಿಗಳು ರೆಡ್ಡಿ ಪುತ್ರಿಯ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಬಾರದು ಎಂದು ಹೇಳಿದರು.
 
ಕಪ್ಪು ಹಣದಲ್ಲೆ ಮಗಳ ವಿವಾಹ ಮಾಡುತ್ತಿರುವ ರೆಡ್ಡಿ ಅವರನ್ನು ಬಿಜೆಪಿ ನಾಯಕರು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಆಗ್ರಹಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments