Publish Date: Mon, 16 Dec 2019 (18:33 IST)
Updated Date: Mon, 16 Dec 2019 (18:37 IST)
ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ತೋರಿದ್ದಲ್ಲದೇ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾನೆ ಎಂದು ಆರೋಪಿಸಿ ಪಾಲಕರು ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯ ವಿವೇಕಾನಂದ ನಗರದಲ್ಲಿರುವ ಬೆನಕ ಶಾಲೆಯ ವಾಹನ ಚಾಲಕ ಡೆವಿಡ್ ಅಸಭ್ಯ ವರ್ತನೆ ತೋರಿದವನಾಗಿದ್ದು, ಇವನು ಬೆನಕ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ.
ಅಷ್ಟೇ ಅಲ್ಲ ವಿದ್ಯಾರ್ಥಿನಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾನೆ ಎಂದು ಆರೋಪಿಸಿದ ವಿದ್ಯಾರ್ಥಿಯ ಪೋಷಕರು ಕೂಡಲೇ ವಾಹನ ಚಾಲಕನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಆಗ್ರಹಿಸಿದರು.
ಬೆಳ್ಳಂಬೆಳಗ್ಗೆಯೇ ಶಾಲೆಗೆ ಆಗಮಿಸಿದ ಪಾಲಕರು, ಶಾಲಾ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.