ಬೆಂಗಳೂರು : ಇಂದು ಮಂಗಳವಾರ ರಾಹುಗ್ರಸ್ತ ಚಂದ್ರಗ್ರಹಣದ ಕಾರ್ಮೋಡ.
15 ದಿನಗಳ ಅಂತರದಲ್ಲಿ ಸೂರ್ಯಗ್ರಹಣ ಹಾಗೂ ಚಂದ್ರಗ್ರಹಣಕ್ಕೆ ಭಾರತ ಸಾಕ್ಷಿಯಾಗಲಿದ್ದು, ಕರುನಾಡಿನಲ್ಲಿಯೂ ಪಾರ್ಶ್ವ ಚಂದ್ರಗ್ರಹಣದ ಛಾಯೆ ಗೋಚರಿಸಲಿದೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸೂರ್ಯಗ್ರಹಣ ಸಂಭವಿಸಿತ್ತು. ಇದೀಗ 15 ದಿನದ ಅಂತರದಲ್ಲಿಯೇ ಕಾರ್ತಿಕ ಪೂರ್ಣಿಮೆಯ ದಿನ ರಾಹುಗ್ರಸ್ಥ ಚಂದ್ರಗ್ರಹಣ ಸಂಭವಿಸಲಿದೆ.
15 ದಿನದ ಅಂತರದಲ್ಲಿ ಎರಡು ಗ್ರಹಣ ಸಂಭವಿಸಿರೋದ್ರಿಂದ ಜ್ಯೋತಿಷ್ಯ ಶಾಸ್ತ್ರದಲ್ಲಿ ಸಹಜವಾಗಿ ಪ್ರಾಮುಖ್ಯತೆ ಪಡೆದುಕೊಂಡಿದೆ. ಭರಣಿ ನಕ್ಷತ್ರ ಮೇಷರಾಶಿಯಲ್ಲಿ ಸಂಭವಿಸಲಿರುವ ಗ್ರಹಣದಿಂದ ಕೆಲ ರಾಶಿಯವರಿಗೆ ಅಪತ್ತು ಕೆಲ ರಾಶಿಯವರಿಗೆ ಉತ್ತಮವೂ ಆಗಲಿದೆ ಎನ್ನುವ ವಿಶ್ಲೇಷಣೆಗಳು ಕೇಳಿಬಂದಿದೆ.
ಗ್ರಹಣದ ಅವಧಿ
> ಗ್ರಹಣ ಸ್ಪರ್ಶಕಾಲ – 2.39ಕ್ಕೆ
> ಗ್ರಹಣ ಮಧ್ಯಕಾಲ – 4.29ಕ್ಕೆ
> ಗ್ರಹಣ ಮೋಕ್ಷಕಾಲ – 6.19ಕ್ಕೆ