Select Your Language

Notifications

webdunia
webdunia
webdunia
webdunia

ಹರಿಯಾಣದಲ್ಲಿ ಅರಳಿದ ಕಮಲ: ಸಿಹಿ ಹಂಚಿ ಕರ್ನಾಟಕ ಬಿಜೆಪಿ ನಾಯಕರ ಸಂಭ್ರಮ

Haryana Assembly Election2024, Haryana Election Result, BJP Karnataka

Sampriya

ಬೆಂಗಳೂರು , ಮಂಗಳವಾರ, 8 ಅಕ್ಟೋಬರ್ 2024 (17:59 IST)
Photo Courtesy X
ಬೆಂಗಳೂರು: ಹರಿಯಾಣ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಹ್ಯಾಟ್ರಿಕ್‌ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಿಹಿ ಹಂಚಿ ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆ ನಡೆಸಿತು.

ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎಕ್ಸಿಟ್‌ ಪೋಲ್ ಭವಿಷ್ಯ ಉಲ್ಟಾ ಪಲ್ಟಾ ಆಗಿ ಇದೀಗ ಬಿಜೆಪಿಯೇ ಪುನಃ ಹರ್ಯಾಣದಲ್ಲಿ ಅಧಿಕಾರಕ್ಕೆ ಬಂದಿದೆ. ಹರಿಯಾಣ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದೆ.

ಈ ಸಂದರ್ಭದಲ್ಲಿ ವಿಧಾನ ಸಭಾ ವಿರೋಧ ಪಕ್ಷ ನಾಯಕ ಆರ್ ಅಶೋಕ್, ವಿಧಾನ ಪರಿಷತ್‌ ವಿಪಕ್ಷ ನಾಯಕರಾದ  ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್‌ ಸದಸ್ಯರಾದ ಸಿಟಿ ರವಿರಾಜ್ಯ ಕಾರ್ಯದರ್ಶಿಗಳು ಹಾಗೂ ಶಾಸಕರಾದ  ಬಸವರಾಜ ಮತ್ತೀಮಡು, ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷರಾದ ಸಿಮೆಂಟ್ ಮಂಜು, ಶಾಸಕರಾದ  ಮಾನಪ್ಪ ವಜ್ಜಲ್, ಮಾಜಿ ಸಂಸದರಾದ ಮುನಿಸ್ವಾಮಿ ಸೇರಿದಂತೆ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಹರಿಯಾಣ ಚುನಾವಣೆಯಲ್ಲಿ ಜನರು ನೀಡಿರುವ ತೀರ್ಪನ್ನು ಒಪ್ಪುತ್ತೇವೆ: ಡಿಕೆ ಶಿವಕುಮಾರ್‌