ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ತನ್ವೀರ್ ಸೇಠ್ ಅಶ್ಲೀಲ ಚಿತ್ರಗಳ ವೀಕ್ಷಣೆ ಸುದ್ದಿ ತಿಳಿಯುತ್ತಿದ್ದಂತೆ ಕೆಂಡಾಮಂಡಲವಾದ ಸಿಎಂ ಸಿದ್ದರಾಮಯ್ಯ ಸಚಿವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ವಿಧಾನಸಭೆಯಲ್ಲಿ ಉಪಸ್ಥಿತರಿದ್ದ ಸಿಎಂ ಸಿದ್ದರಾಮಯ್ಯ, ಸಚಿವ ತನ್ವೀರ್ ಸೇಠ್‌ಗೆ ಫೋನ್ ಕರೆ ಮಾಡಿ ವೇದಿಕೆಯಲ್ಲಿ ಏನೇನಾಯಿತು ಎನ್ನುವ ವಿವರಣೆ ಕೇಳಿ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಚಿವರಾಗಿದ್ದುಕೊಂಡು ಇಂತಹ ಕೆಲಸ ಮಾಡುವುದಕ್ಕೆ ನಾಚಿಕೆಯಾಗುವುದಿಲ್ಲವೇ. ಕೂಡಲೇ ನಡೆದ ಘಟನೆಯ ಬಗ್ಗೆ ವಿವರಣೆ ಕೊಡಿ ಎಂದು ಗುಡುಗಿದ್ದಾರೆ.
ಪ್ರಕರಣದ ಬಗ್ಗೆ ನನಗೆ ಇಲ್ಲಿಯವರೆಗೆ ಮಾಹಿತಿಯಿಲ್ಲ. ಮಾಹಿತಿ ತರಿಸಿಕೊಂಡ ನಂತರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ ಎಂದಿದ್ದಾರೆ. ನಡೆದ ಘಟನೆಯ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ. ವರದಿ ತರಿಸಿಕೊಳ್ಳದೇ ಹೇಗೆ ಸಚಿವರ ರಾಜೀನಾಮೆ ಪಡೆಯಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ