ಭಾರತದಲ್ಲಿ 150 ಡೋಸ್ ಕೋವಿಡ್ ಲಸಿಕೆಯನ್ನು ವಿತರಿಸುವ ಮೂಲಕ ಮೈಲುಗಲ್ಲನ್ನು ತಲುಪಿದೆ. ಶೇ. 90 ಕೊರೊನಾ ಪ್ರಕರಣಗಳು ಬೆಂಗಳೂರಿನಂತೆ ಕಾಣಿಸಿಕೊಂಡಿರುವುದರಿಂದ ಹೆಚ್ಚು ಎಚ್ಚರ ವಹಿಸಲಾಗಿದೆ.
ಬೂಸ್ಟರ್ ಡೋಸ್ ನೀಡಲಾಗುವುದು. ಕೋವಿಡ್ ವಾರಿಯರ್ಸ್, ಹೆಲ್ತ್ ವರ್ಕರ್ಸ್‌ಗೆ ಬೂಸ್ಟರ್ ಡೋಸ್ ನೀಡಲಾಗುತ್ತಿದೆ. ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಪ್ರಯಾಣಿಸುವವರಿಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಲು ಕೇಂದ್ರ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪತ್ರ ಬರೆದು ಮನವಿ ಮಾಡಿದ್ದಾರೆ. ಆಸ್ಪತ್ರೆಗೆ ಬಂದವರು ಮಾತ್ರ ಆಸ್ಪತ್ರೆಗೆ ದಾಖಲಾಗುತ್ತಾರೆ, ಅನಗತ್ಯವಾಗಿ ರಾಜಕಾರಣಿಗಳು, ಅಧಿಕಾರಿಗಳು, ಉದ್ಯಮಿಗಳು, ಸೆಲೆಬ್ರಿಟಿಗಳು ಪ್ರಭಾವ ಬೀರಿ ಆಸ್ಪತ್ರೆಗೆ ದಾಖಲಾಗಬಾರದು ಎಂದು ಸುಧಾಕರ್ ಮನವಿ ಮಾಡಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ರಾಜ್ಯಮಟ್ಟದಲ್ಲಿ ಜವಾಬ್ದಾರಿ ವಹಿಸಲಾಗಿದೆ. ರಾಜ್ಯಮಟ್ಟದಲ್ಲಿ ಸಮನ್ವಯ ಸಾಧಿಸಲು ಸೂಚನೆ ನೀಡಲಾಗಿದೆ. ರಾಜ್ಯ, ದೇಶಗಳಿಂದ ವಿಮಾನದಲ್ಲಿ ಬರುವವರ ಮೇಲೆ ಯಾವ ರೀತಿಯಲ್ಲಿ ನಿಗಾ ಇಡುತ್ತಿದ್ದೇವೋ ಅದೇ ರೀತಿ ಬೇರೆ ರಾಜ್ಯಗಳಿಂದ ರೈಲುಗಳಲ್ಲಿ ಬರುವವರ ಮೇಲೂ ನಿಗಾ ಇಡಲಾಗುತ್ತಿದೆ. ರಾಜ್ಯದ ಗಡಿಗಳ ಚೆಕ್‌ಪೋಸ್ಟ್‌ನಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಲಾಗುತ್ತಿದೆ. ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಪ್ರಯಾಣಿಸುವವರಿಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಲು ಕೇಂದ್ರ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪತ್ರ ಬರೆದು ಮನವಿ ಮಾಡಿದ್ದಾರೆ