Publish Date: Mon, 04 Sep 2023 (19:00 IST)
Updated Date: Mon, 04 Sep 2023 (19:04 IST)
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಲರ್ಟ್ ಆಗಿದೆ.. ಕ್ಷೇತ್ರ ಭದ್ರಪಡಿಸಿಕೊಳ್ಳಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಲಾಗಿದೆ.. ಸಂಸದ ಡಿ.ಕೆ.ಸುರೇಶ್ ನೇತೃತ್ವದಲ್ಲಿ ಜನಸ್ಪಂದನಾ ಸಭೆ ಕೂಡ ನಡೆಸಲಾಗಿದೆ.. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಕಾಂಗ್ರೆಸ್ಗೆ ಬಲ ತುಂಬಲು ಪ್ಲ್ಯಾನ್ ಮಾಡಿಕೊಳ್ಳಲಾಗಿದ್ದು, ಪ್ರತಿ ಗ್ರಾಮ ಪಂಚಾಯಿತಿಗಳಿಗೂ ಭೇಟಿ ನೀಡಿ ಪಕ್ಷ ಸಂಘಟನೆಗೆ ಒತ್ತು ನೀಡ್ತಿದ್ದಾರೆ.