Publish Date: Fri, 30 Nov 2018 (17:23 IST)
Updated Date: Fri, 30 Nov 2018 (17:25 IST)
ಪ್ರಯಾಣ ವಿಚಾರದಲ್ಲಿ ಗಲಾಟೆ ನಡೆದು ಕೊನೆಗೆ ಬಸ್ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ.
ಬಿಎಂಟಿಸಿ, ಕೆಎಸ್ಆರ್ ಟಿಸಿ ಸಿಬ್ಬಂದಿಗಳ ನಡುವೆ ಗಲಾಟೆ ನಡೆದಿದೆ. ಬಿಎಂಟಿಸಿ ಸಿಬ್ಬಂದಿಯಿಂದ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಇದರಿಂದಾಗಿ ಬಸ್ ಹಿಂಬದಿಯ ಗಾಜು ಜಖಂಗೊಂಡಿದೆ.
ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿ ಬಳಿ ಘಟನೆ ನಡೆದಿದೆ. ಇಬ್ಬರು ಬಿಎಂಟಿಸಿ ಸಿಬ್ಬಂದಿಗಳು ಪೊಲೀಸ್ ವಶಕ್ಕೆ ಒಳಗಾಗಿದ್ದಾರೆ.
ಬೆಂಗಳೂರಿನಿಂದ ದಾವಣಗೆರೆಗೆ ಸಂಚರಿಸುತಿದ್ದ ಕೆಎಸ್ಆರ್ ಟಿಸಿ ಬಸ್ ನಲ್ಲಿ ಪ್ರಯಾಣದ ವಿಚಾರದಲ್ಲಿ ಸಿಬ್ಬಂದಿಗಳ ನಡುವೆ ಗಲಾಟೆ ಆಗಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.