Select Your Language

Notifications

webdunia
webdunia
webdunia
webdunia

Bengaluru: ಕಿಲ್ಲರ್ ಬಿಎಂಟಿಸಿಗೆ 11 ರ ಬಾಲಕ ಬಲಿ

BMTC

Krishnaveni K

ಬೆಂಗಳೂರು , ಸೋಮವಾರ, 25 ಆಗಸ್ಟ್ 2025 (09:11 IST)
ಬೆಂಗಳೂರು: ಬಿಎಂಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ 11 ವರ್ಷದ ಬಾಲಕ ಮೃತಪಟ್ಟಿರುವ ಧಾರುಣ ಘಟನೆ ಕೆಆರ್ ಮಾರ್ಕೆಟ್ ಬಳಿ ನಡೆದಿದೆ.

ಶಬರೀಶ್ ಎನ್ನುವ 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಕುಟುಂಬದವರ ಜೊತೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಬಸ್ ಢಿಕ್ಕಿ ಹೊಡೆದಿದ್ದು ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಾರ್ಕೆಟ್ ಗೆ ಬಂದಿದ್ದಾನೆ.

ಬೈಕ್ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಶಬರೀಶ್ ಕೆಳಕ್ಕೆ ಬಿದ್ದಿದ್ದಾನೆ. ಆತನ ಮೇಲೆಯೇ ಬಸ್ ಹರಿದಿದೆ. ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಚಾಲಕ ಮತ್ತು ನಿರ್ವಾಹಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ಸಂಬಂಧ ಹಲಸೂರು ಗೇಟ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೃತ ಬಾಲಕ ಶಬರೀಶ್ ಜಿಎಂ ಪಾಳ್ಯದ ನಿವಾಸಿಯಾಗಿದ್ದಾರೆ. ಇತ್ತೀಚೆಗಿನ ದಿನಗಳಲ್ಲಿ ಬಿಎಂಟಿಸಿ ಅಪಘಾತದಿಂದ ಮೃತಪಟ್ಟ ಮತ್ತೊಂದು ಘಟನೆ ಇದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Karnataka Weather: ಈ ವಾರದ ಹವಾಮಾನ ವರದಿ ಇಲ್ಲಿದೆ