Webdunia - Bharat's app for daily news and videos

Install App

ಬಿಎಂಟಿಸಿ ಬಸ್ ಧಗ ಧಗ

Webdunia
ಶುಕ್ರವಾರ, 21 ಜನವರಿ 2022 (14:05 IST)
ನಡುರಸ್ತೆಯಲ್ಲೇ ಬಿಎಂಟಿಸಿ ಬಸ್ಸೊಂದು ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದಿದೆ.
 
ಬೆಂಗಳೂರಿನ ಚಾಮರಾಜಪೇಟೆ (chamarajpet)ಯ ಮಕ್ಕಳಕೂಟ (makkala koota) ಬಳಿ ಈ ಘಟನೆ ನಡೆದಿದ್ದು, ದೀಪಾಂಜಲಿನಗರ ಡಿಪೋಗೆ ಸೇರಿದ K.R. ಮಾರ್ಕೆಟ್ ಕಡೆ ತೆರಳುತ್ತಿದ್ದ ಬಿಎಂಟಿಸಿ ಬಸ್‌ (KA 57 F 1592) ಬೆಂಕಿಗಾಹುತಿಯಾಗಿದೆ.
ಬಸ್ ಚಲಿಸುತ್ತಿದ್ದಾಗ ಮಕ್ಕಳಕೂಟ ಬಳಿ ಬೆಂಕಿ ಕಾಣಿಸಿಕೊಂಡಿತ್ತು. ಆರಂಭದಲ್ಲಿ ಬಸ್ ನ ಇಂಜಿನಲ್ಲಿ ಹೊಗೆ ಕಾಣಿಸಿಕೊಂಡಿತ್ತು. ಬಳಿಕ ನೋಡನೋಡುತ್ತಲೇ ಬೆಂಕಿಯ ರಭಸ ಜೋರಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ.
 
ಬಸ್ ನಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಚಾಲಕ ಮತ್ತು ನಿರ್ವಾಹಕರು ಬಸ್ ನಿಂದ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಈ ವೇಳೆ ಬಸ್ ನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಬಳಿಕ ಸಿಬ್ಬಂದಿ ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಕಲ್ಪಿಸಿದ್ದಾರೆ.
 
ಇನ್ನು ಬಸ್ ನಲ್ಲಿದ್ದ ಫಸ್ಟ್ ಏಯ್ಡ್​ ಹಾಗೂ ಟಿಕೆಟ್ ಹಾಗೂ ದಿನದ ಪಾಸ್ ಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments