Select Your Language

Notifications

webdunia
webdunia
webdunia
webdunia

ಬಂದ್ ಗೆ ನೈತಿಕ ಬೆಂಬಲ ನೀಡಿರುವ ಬಿಎಂಟಿಸಿ

ಬಂದ್ ಗೆ ನೈತಿಕ ಬೆಂಬಲ ನೀಡಿರುವ ಬಿಎಂಟಿಸಿ
ಬೆಂಗಳೂರು , ಸೋಮವಾರ, 27 ಡಿಸೆಂಬರ್ 2021 (16:11 IST)
ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಿಷೇಧಿಸುವಂತೆ ಆಗ್ರಹಿಸಿ ಡಿ.31ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಈ ಬಂದ್'ಗೆ ಸಾರಿಗೆ ನೌಕರರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಅಧಿಕಾರಿಗಳು ಗೈರು ಹಾಜರಾಗದಂತೆ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದಾರೆ.
ಬಂದ್'ಗೆ 1.15 ಲಕ್ಷ ಸಾರಿಗೆ ನೌಕರರು ಬೆಂಬಲ ವ್ಯಕ್ತಪಡಿಸಿದ್ದು, ಈ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗದಂತೆ ಕೆಎಸ್‌ಆರ್'ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಅವರು ಹೇಳಿದ್ದಾರೆ.
 
ನಮ್ಮ ಸೇವೆ ಅಗತ್ಯ ಸೇವೆಗಳ ಪಟ್ಟಿಗೆ ಸೇರಲಿದ್ದು, ನಮ್ಮ ನೌಕರರುತಮ್ಮ ಜವಾಬ್ದಾರಿಗಳನ್ನು ತಿಳಿದಿದ್ದಾರೆ. ಬಂದ್‌ಗೆ ಬೆಂಬಲ ನೀಡಿ ಕರ್ತವ್ಯಕ್ಕೆ ಗೈರು ಹಾಜರಾಗುವುದನ್ನು ನಾನು ನಿರೀಕ್ಷಿಸುವುದಿಲ್ಲ. ಡಿಸೆಂಬರ್ 31 ರಂದು ನಾವು ಯಾವುದೇ ಅಡೆತಡೆಗಳಿಲ್ಲದೆ ಸೇವೆಯನ್ನು ನಡೆಸುತ್ತೇವೆ. ನಮ್ಮ ಸಿಬ್ಬಂದಿ ಬಂದ್‌ಗೆ ನೈತಿಕ ಬೆಂಬಲವನ್ನು ಮಾತ್ರ ನೀಡಲಿದ್ದಾರೆಂದು ಶಿವಯೋಗಿ ಅವರು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಟೋ ಚಾಲರಿಗೆ ನೈಟ್ ಕರ್ಫ್ಯೂ ನುಂಗಲಾರದ ಬಿಸಿ ತುಪ್ಪ