Webdunia - Bharat's app for daily news and videos

Install App

ನಾಳೆಯಿಂದ ಮಂಗಳೂರಿನಿಂದ ಕಾಸರಗೋಡು ಬಸ್ ಸಂಚಾರ ಆರಂಭ

Webdunia
ಭಾನುವಾರ, 18 ಜುಲೈ 2021 (19:36 IST)
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಆನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದು, ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚಿನ ಜಾಗರೂಕತೆಯನ್ನು ಅನುಸರಿಸುವ ಅನಿವಾರ್ಯವಿದೆ. ಮುಂಬರುವ ದಿನಗಳಲ್ಲಿ ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಪ್ರಸ್ತುತ ರಾಜ್ಯ ಸರ್ಕಾರವು ಕೇರಳ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ಸಂಖ್ಯೆಯಲ್ಲಿ ದಿನನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚಾರ ಮಾಡುತ್ತಿದ್ದು, ಕಾಸರಗೋಡು - ಮಂಗಳೂರು ನಡುವಿನ ಬಸ್ ಸಂಚಾರಕ್ಕೆ ಸೋಮವಾರದಿಂದ ಈ ಕೆಳಕಂಡ ಪರತ್ತಿಗೊಳಪಟ್ಟು ಅನುಮತಿಸಲಾಗಿದೆ.
ಕೆ.ಎಸ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್ ಗಳ ಮೂಲಕ ಪ್ರಯಾಣಿಸುವವರು ಕೋವಿಡ್ ಲಸಿಕ ಕನಿಷ್ಠ 1 ಡೋಸ್ ಪಡೆದಿರುವ ಅಥವಾ 72 ಗಂಟೆಗಳ ಒಳಗೆ ಮಾಡಿಸಿರುವ RT-PCR ಪರೀಕ್ಷೆಯ ನಗೆಟಿವ್ ವರದಿಯನ್ನು ಆಯಾ ಬಸ್ ನ
ನಿರ್ವಾಹಕರು (Bus Conductor) ಖಚಿತಪಡಿಸಕೊಳ್ಳತಕ್ಕದ್ದು.
ಕೋವಿಡ್‌ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸುವುದು. (ಮುಖ ಗವಸು, ಸ್ಯಾನಿಫರ್, ಸಾರ್ವಜನಿಕ ಅಂತರ)
ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಕರ್ನಾಟಕ ಸಾಂಕ್ರಮಿಕ ರೋಗಗಳ ಅಧಿನಿಯಮ2020, ವಿಪತ್ತು ನಿರ್ವಹಣಾ ಕಾಯ್ದೆ, 2005 ರಡಿ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು  ಎಂದು  
ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರೋ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments