ಬೆಂಗಳೂರು: ಡಿಸೆಂಬರ್ ನಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಿಎಂಟಿಸಿ ಮತ್ತು ಕೆಎಸ್ ಆರ್ ಟಿಸಿ ಬಸ್ ಮುಷ್ಕರ ನಡೆದಿತ್ತು. ಆದರೆ ಅಂದು ಸರ್ಕಾರ ನೀಡಿದ್ದ ಭರವಸೆಗಳು ಈಡೇರಿಸಿಲ್ಲ ಎಂದು ಬಸ್ ಕಾರ್ಮಿಕ ಸಂಘಟನೆಗಳು ಮತ್ತೆ ಮುಷ್ಕರಕ್ಕೆ ಕರೆ ಕೊಡುವ ಸಾಧ‍್ಯತೆಯಿದೆ.
ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಮತ್ತೆ ಬಸ್ ಮುಷ್ಕರ ನಡೆಸಲು ಯೋಜನೆ ನಡೆಸಲಾಗಿದೆ. ಡಿಸೆಂಬರ್ ನಲ್ಲಿ ಸರ್ಕಾರ ನೀಡಿದ್ದ ಭರವಸೆಗಳೆಲ್ಲವೂ ಈಡೇರಿಲ್ಲ. ಈ ಬಗ್ಗೆ ಸರ್ಕಾರ ಕ್ರಮವನ್ನೂ ಕೈಗೊಂಡಿಲ್ಲ. ಹೀಗೇ ಮುಂದುವರಿದರೆ ಮತ್ತೆ ಬೇಡಿಕೆ ಈಡೇರುವವರೆಗೆ ಮುಷ್ಕರ ನಡೆಸಬೇಕಾಗುತ್ತದೆ ಎಂದು ಕೋಡಿಹಳ್ಳಿ ಎಚ್ಚರಿಕೆ ನೀಡಿದ್ದಾರೆ.