ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ಕೆಆರ್‌ಎಸ್ ಡ್ಯಾಂಗೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಡ್ಯಾಂನಿಂದ 11,633 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದ್ದು, ಇದರಿಂದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದ ನಡುಗಡ್ಡೆಗಳು ಮುಳುಗಡೆಯ ಅಂಚಿಗೆ ಬಂದಿವೆ. ನಡುಗಡ್ಡೆಗಳು ಮುಳುಗಡೆಯ ಅಂಚಿಗೆ ಬಂದಿರುವ ಕಾರಣ ರಂಗನತಿಟ್ಟು ಪಕ್ಷಿಧಾಮದಲ್ಲಿ ಇಂದಿನಿಂದ ಪ್ರವಾಸಿಗರಿಗೆ ಬೋಟಿಂಗ್ ಅನ್ನು ರದ್ದು ಮಾಡಲಾಗಿದೆ. ಇದೇ ರೀತಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಮುಂದುವರಿದ ಸಂದರ್ಭದಲ್ಲಿ ಕೆಆರ್‌ಎಸ್ ಡ್ಯಾಂನಿಂದ ಮತ್ತಷ್ಟು ನೀರನ್ನು ನದಿಗೆ ಬಿಡಲಾಗುತ್ತದೆ. ಇದರಿಂದ ರಂಗನತಿಟ್ಟು ಪಕ್ಷಿಧಾಮ ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆ ಇದೆ