Webdunia - Bharat's app for daily news and videos

Install App

ರಂಗನತಿಟ್ಟಿನಲ್ಲಿ ಬೋಟಿಂಗ್ ಸ್ಥಗಿತ

Webdunia
ಭಾನುವಾರ, 15 ಜುಲೈ 2018 (13:31 IST)
ಮಳೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಜಾಗೃತ ಕ್ರಮವಾಗಿ ಮಂಡ್ಯದ ಕೆ.ಆರ್.ಎಸ್. ಜಲಾಶಯದಿಂದ ಕಾವೇರಿ ನದಿಗೆ 50 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ರಂಗನತಿಟ್ಟಿನಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ.

 
ಕೊಡಗು ಸೇರಿದಂತೆ ಮಳೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಜಾಗೃತ ಕ್ರಮವಾಗಿ ಮಂಡ್ಯದ ಕೆ.ಆರ್.ಎಸ್. ಜಲಾಶಯದಿಂದ ಕಾವೇರಿ ನದಿಗೆ 50 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ.
124.80 ಅಡಿ ಸಾಮರ್ಥ್ಯದ ಕೆ.ಆರ್.ಎಸ್. ಜಲಾಶಯ 123.65 ಅಡಿ ಭರ್ತಿಯಾಗಿದ್ದು, ಜಲಾಶಯಕ್ಕೆ 45 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.

ಒಳ ಹರಿವಿನಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರೋದ್ರಿಂದ ಮುಜಾಗೃತ ಕ್ರಮವಾಗಿ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರನ್ನ ನದಿಗೆ ಬಿಡಲಾಗುತ್ತಿದೆ. ನದಿ ಪಾತ್ರದ ಜನರಿಗೆ ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಕಾವೇರಿ ನೀರಾವರಿ ನಿಗಮ ಸೂಚನೆ ನೀಡಿತ್ತು. ಜೊತೆಗೆ ಪ್ರಸಿದ್ಧ ಪ್ರವಾಸಿ ತಾಣವಾಗಿರೊ ರಂಗನತಿಟ್ಟಿನಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ.  ಅಣೆಕಟ್ಟೆಯಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುತ್ತಿರೋದ್ರಿಂದ ಕಾವೇರಿ ನದಿ ಹುಕ್ಕಿ ಹರಿಯುತ್ತಿದೆ. ಅಣೆಕಟ್ಟೆ ಭರ್ತಿಯಾಗಿರುವುದು ಬರದಿಂದ ತತ್ತರಿಸಿದ್ದ ಮಂಡ್ಯ ಜಿಲ್ಲೆಯ ರೈತರ ಮೊಗದಲ್ಲಿ ಸಂತಸ ತರಿಸಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments