Webdunia - Bharat's app for daily news and videos

Install App

ಚೊಚ್ಚಲ ಚುನಾವಣೆಯಲ್ಲೇ ಭರ್ಜರಿ ಜಯ ಸಾಧಿಸಿದ ಬಾಲಿವುಡ್‌ ನಟಿ ಕಂಗನಾ ರನೌತ್

sampriya
ಮಂಗಳವಾರ, 4 ಜೂನ್ 2024 (19:36 IST)
Photo By X
ಮಂಡಿ: ಮೊದಲ ಬಾರಿ ಲೋಕಸಭಾ ಚುನಾವಣೆ ಮೂಲಕ ರಾಜಕೀಯ ಎಂಟ್ರಿ ಕೊಟ್ಟ ಬಾಲಿವುಡ್‌ ನಟಿ ಕಂಗನಾ ರನೌತ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ.‌

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ, ನಟಿ ಕಂಗನಾ ರನೌತ್ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ  74,755 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ಕಂಗನಾ ರನೌತ್ ಅವರು 5,37,002 ಮತಗಳನ್ನು ಪಡೆದರೆ, ವಿಕ್ರಮಾದಿತ್ಯ ಸಿಂಗ್ ಅವರು 4,62,267 ಮತಗಳನ್ನು ಪಡೆದಿದ್ದಾರೆ.


ಇನ್ನೂ ಗೆಲುವಿನ ಕುರಿತು ಪ್ರತಿಕ್ರಿಯಿಸಿದ ಕಂಗನಾ ಅವರು, ನನ್ನ ಗೆಲುವಿನ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ಕುಟುಂಬ ರಾಜಕಾರಣದ ವಿರುದ್ಧ ಮಂಡಿಯ ಜನ ಮತ ಚಲಾಯಿಸಿದ್ದು, ಜನಸಾಮಾನ್ಯರ ಪರ ನಿಂತಿದ್ದಾರೆ. ಮುಂದಿನ ದಿನಗಳಲ್ಲಿ ಮಂಡಿ ಕ್ಷೇತ್ರದ ಜನರಿಗಾಗಿ ಪೂರ್ಣ ಮನಸ್ಸಿನಿಂದ ಕೆಲಸ ಮಾಡುತ್ತೇನೆ ಎಂದರು.
ಇದೇ ವೇಳೆ ಹಿಮಾಚಲ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜೈರಾಮ್‌ ಠಾಕೂರ್‌, ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರಿಗೆ ಧನ್ಯವಾದ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments