Publish Date: Mon, 25 Jul 2022 (15:25 IST)
Updated Date: Mon, 25 Jul 2022 (15:30 IST)
ವರ್ಷಗಳಿಂದ ಬಣ್ಣದ ಲೋಕದಲ್ಲಿ ಸಕ್ರಿಯರಾಗಿರುವ ಅವರು ಸಾಕಷ್ಟು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ದೇಶಭಕ್ತಿ ಕಥಾಹಂದರದ ಸಿನಿಮಾಗಳನ್ನು ಮಾಡಿಯೂ ಸೈ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ, ಹಲವು ಸಂದರ್ಭದಲ್ಲಿ ಅಕ್ಷಯ್ ಕುಮಾರ್ ರಿಯಲ್ ಹೀರೋ ಎನಿಸಿಕೊಂಡಿದ್ದುಂಟು.
ಈಗ ತೆರಿಗೆ ವಿಚಾರದಲ್ಲಿ ಅವರು ಸುದ್ದಿ ಆಗುತ್ತಿದ್ದಾರೆ. ಅತಿ ಹೆಚ್ಚು ಟ್ಯಾಕ್ಸ್ ಪಾವತಿಸುವ ಸೆಲೆಬ್ರಿಟಿ ಎಂಬ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ. ಇದಕ್ಕಾಗಿ ಆದಾಯ ತೆರಿಗೆ ಇಲಾಖೆಯಿಂದ ಮೆಚ್ಚುಗೆ ಪತ್ರ ನೀಡಲಾಗಿದೆ.
ಬಾಲಿವುಡ್ನ ಟಾಪ್ ಹೀರೋಗಳ ಪೈಕಿ ಅಕ್ಷಯ್ ಕುಮಾರ್ ಕೂಡ ಪ್ರಮುಖರು. ಪ್ರತಿ ಸಿನಿಮಾಗೆ ಅವರು ಬಹುಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಸಿನಿಮಾ ಮಾತ್ರವಲ್ಲದೇ ಜಾಹೀರಾತುಗಳಲ್ಲಿ ನಟಿಸುವ ಮೂಲಕವೂ ಸಂಪಾದನೆ ಮಾಡುತ್ತಾರೆ. ಅನೇಕ ಪ್ರತಿಷ್ಠಿತ ಬ್ರ್ಯಾಂಡ್ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ದೇಶದ ಅನೇಕ ಕಡೆಗಳಲ್ಲಿ ಅಕ್ಷಯ್ ಕುಮಾರ್ ಆಸ್ತಿ ಹೊಂದಿದ್ದಾರೆ. ಹಲವು ಉದ್ಯಮದ ಮೇಲೆ ಅವರು ಹೂಡಿಕೆ ಮಾಡಿದ್ದಾರೆ.