ಕಳೆದ ವರ್ಷ ನಗರದ ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ದಳದ ಹೈದರಾಬಾದ್ ತಂಡ ಇಂದು ನಗರಕ್ಕೆ ಆಗಮಿಸಿದ್ದು, ತನಿಖೆಗೆ ಆರಂಬಿಸಿದೆ.
ಹೌದು, ಈ ನಡೆದಿದ್ದ ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಕರ್ನಾಟಕ ಪೊಲೀಸರು ತನಿಖೆ ನಡೆಸುತ್ತಿದ್ದರು. ಆದರೆ ರಾಜ್ಯ ಪೊಲೀಸರಿಗೆ ಯಾವುದೇ ಸುಳಿವು ದೊರೆಯದ ಕಾರಣ ಪ್ರಕರಣವನ್ನು ಉನ್ನತ ತನಿಖಾ ತಂಡಕ್ಕೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಗೃಹ ಇಲಾಖೆಗೆ ಪತ್ರ ಬರೆದಿದ್ದ ರಾಜ್ಯ ಸರ್ಕಾರ, ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡ(ಎನ್ಐಎ)ದಿಂದ ತನಿಖೆ ನಡೆಸುವಂತೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಎನ್ಐಎಯ ಹೈದರಾಬಾದ್ ತಂಡದ ಅಧಿಕಾರಿಗಳು ಇಂದು ನಗರಕ್ಕೆ ಆಗಮಿಸಿದ್ದು, ತನಿಖೆಯನ್ನು ಆರಂಭಿಸಿದ್ದಾರೆ.
ಪ್ರಕರಣವನ್ನು ಭಾರತೀಯ ದಂಢ ಸಂಹಿತೆ 120(ಬಿ), 121, 121(ಎ), 302 ಮತ್ತು 307ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ
ಎನ್ಐಎ ತನಿಖಾಧಿಕಾರಿಗಳು, ಕರ್ನಾಟಕ ರಾಜ್ಯ ಪೊಲೀಸರಿಂದ ಪ್ರಕರಣಕ್ಕೆ ಸಂಬಂಧಿಸಿದ ಅಗತ್ಯ ಮಾಹಿತಿ, ಕುರುಹು ಹಾಗೂ ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದಾರೆ. ಅಲ್ಲದೆ ಪ್ರಕರಣ ಸಂಬಂಧ ಚರ್ಚಿಸುತ್ತಿದ್ದಾರೆ.
ಈ ಪ್ರಕರಣವು ಕಳೆದ 2014ರ ಡಿ.28ರಂದು ನಡೆದಿತ್ತು. ಪರಿಣಾಮ ತಮಿಳುನಾಡು ಮೂಲದ ಭವಾನಿ(30) ಎಂಬ ಮಹಿಳೆ ಸಾವನ್ನಪ್ಪಿ ಇತರೆ ಇಬ್ಬರು ಎಂಬಿಎ ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದರು. ತೆಲುಗು ಭಾಷಾ ಪತ್ರಿಕೆಯೊದರಲ್ಲಿ ಬಾಂಬ್ ಇಟ್ಟು ಸ್ಫೋಟಿಸಲಾಗಿದೆ ಎಂಬುದಾಗಿ ಕರ್ನಾಟಕ ತನಿಖಾಧಿಕಾರಿಗಳು ತಿಳಿಸಿದ್ದರು.