Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಆಡಳಿತದಲ್ಲಿ ಬಾಂಬ್ ಸ್ಫೋಟ, ಯುವತಿಯರ ಹತ್ಯೆ: ಎಚ್ಚರದಿಂದಿರಿ ಎಂದ ಮೋದಿ

ಕಾಂಗ್ರೆಸ್ ಆಡಳಿತದಲ್ಲಿ ಬಾಂಬ್ ಸ್ಫೋಟ, ಯುವತಿಯರ ಹತ್ಯೆ: ಎಚ್ಚರದಿಂದಿರಿ ಎಂದ ಮೋದಿ

Sampriya

ಬೆಂಗಳೂರು , ಶನಿವಾರ, 20 ಏಪ್ರಿಲ್ 2024 (19:20 IST)
Photo Courtesy X
ಬೆಂಗಳೂರು: ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯನ್ನು ಕಾಂಗ್ರೆಸ್ ಹಾಳುಮಾಡಿದೆ. ಇದನ್ನು ಟ್ಯಾಂಕರ್ ಸಿಟಿ ಮಾಡಿದೆ. ಭ್ರಷ್ಟಾಚಾರದ ಕಡೆ ಕಾಂಗ್ರೆಸ್ಸಿಗರು ಗಮನ ಕೊಟ್ಟಿದ್ದಾರೆ ಎಂದು  ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟೀಕಿಸಿದರು.

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ‘ವಿಜಯ ಸಂಕಲ್ಪ’ ಸಮಾವೇಶದಲ್ಲಿ ಅವರು ಮಾತನಾಡಿದರು.

 ಇಂಡಿ ಒಕ್ಕೂಟ ತಂತ್ರಜ್ಞಾನದ ವಿರೋಧಿ. ಕಾಂಗ್ರೆಸ್ ಪಕ್ಷ ಆಧಾರ್, ಜನ್‍ಧನ್ ಖಾತೆ ವಿರೋಧಿಸಿತ್ತು. ಕೋವಿಡ್ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಲಸಿಕೆಯನ್ನೂ ವಿರೋಧಿಸಿತ್ತು ಎಂದು ನೆನಪಿಸಿದರು.

ದೇಶದ ಸಮಗ್ರ ಅಭಿವೃದ್ಧಿಗೆ ನಾವು ಬದ್ಧರಿದ್ದೇವೆ. ಇಲ್ಲಿ ಮೆಟ್ರೋ ವಿಸ್ತರಣೆ ನಡೆದಿದ್ದು, ಹಳದಿ ಲೈನ್ ಕೂಡ ಕಾರ್ಯಾರಂಭ ಮಾಡಲಿದೆ ಎಂದು ತಿಳಿಸಿದರು.

ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನನಿಲ್ದಾಣ ಎಲ್ಲೆಡೆ ಚರ್ಚೆಯ ವಿಷಯವಾಗಿದೆ ಎಂದರು. ಮೋದಿ ಸೋಲಿಸುವುದೊಂದೇ 'ಇಂಡಿ'ಯ ಧ್ಯೇಯವಾಗಿದೆ. ಕಾಂಗ್ರೆಸ್ ಪಕ್ಷ ಯುವಜನರ ವಿರೋಧಿ, ಹೂಡಿಕೆಗೆ ವಿರೋಧಿ. ಉದ್ಯಮಗಳ ವಿರೋಧಿ ಪಕ್ಷವದು ಎಂದು ಟೀಕಿಸಿದರು. ಕಾಂಗ್ರೆಸ್ ಆಡಳಿತದಲ್ಲಿ ಬಾಂಬ್ ಸ್ಫೋಟವಾಗುತ್ತಿದೆ. ಯುವತಿಯರ ಹತ್ಯೆ ಆಗುತ್ತಿದೆ ಎಂದು ವಿವರಿಸಿದರು. ಕಾಂಗ್ರೆಸ್ ಬಗ್ಗೆ ಎಚ್ಚರದಿಂದಿರಿ ಎಂದು ತಿಳಿಸಿದರು.

ಕರ್ನಾಟಕದ ಕಾಂಗ್ರೆಸ್ ಸರಕಾರವು ರೈತರ ವಿರೋಧಿ ಎಂದು ಆಕ್ಷೇಪಿಸಿದರು.

ಕೇಂದ್ರ ಸರಕಾರವು ರೈತರ ಉತ್ಪನ್ನಗಳನ್ನು ಶೇಖರಿಸಲು ಗೋದಾಮುಗಳನ್ನು ನಿರ್ಮಿಸುತ್ತಿದೆ. ರಾಗಿಯನ್ನು ಜಗತ್ತಿನ ವಿವಿಧ ದೇಶಗಳಿಗೆ ಪರಿಚಯಿಸಿದ್ದೇವೆ. ನಿಮ್ಮ ಸಂಕಲ್ಪಗಳನ್ನು ಈಡೇರಿಸಲು ಬಿಜೆಪಿ- ಜೆಡಿಎಸ್ ಒಟ್ಟಾಗಿವೆ. ನಿಮ್ಮ ಕನಸು ನನಸಾಗಿಸುವುದೇ ನನ್ನ ಸಂಕಲ್ಪ. 24-7, 2047 ನನ್ನ ಸಂಕಲ್ಪ.

ವಿಕಸಿತ ಭಾರತಕ್ಕಾಗಿ 26ರಂದು ಬಿಜೆಪಿ- ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು. ಗರಿಷ್ಠ ಮತದಾನ ಮಾಡಿ; ಮನೆಮನೆಗೆ ತೆರಳಿ 'ಮೋದಿಜೀ ಬಂದಿದ್ದರು; ನಿಮಗೆ ನಮಸ್ಕಾರ ಹೇಳಿದ್ದಾರೆ' ಎಂದು ತಿಳಿಸಲು ವಿನಂತಿಸಿದರು.

ಕರ್ನಾಟಕಕ್ಕೂ ಬುಲೆಟ್ ಟ್ರೈನ್ ಸಿಗಲಿದೆ. ಯುವಜನರಿಗೆ ಉದ್ಯೋಗಾವಕಾಶ ಸಿಗುತ್ತಿದೆ. ಹೂಡಿಕೆ ಅವಕಾಶಗಳು ಹೆಚ್ಚಾಗಿವೆ. ಡ್ರೋಣ್ ಉಪಯೋಗದ ಅವಕಾಶಗಳು ಹೆಚ್ಚಿಸಿದ್ದೇವೆ. ಡಿಜಿಟಲ್ ಇಂಡಿಯದಿಂದ ಹೊಸ ಉದ್ಯಮಗಳು ಬಂದಿವೆ ಎಂದು ಹೇಳಿದರು.

ಇದೆಲ್ಲವನ್ನೂ ಕಾಂಗ್ರೆಸ್ ಮಾಡಲು ಸಾಧ್ಯವಿತ್ತೇ ಎಂದು ಪ್ರಶ್ನಿಸಿದರು. ಎಚ್‍ಎಎಲ್‍ಗೆ ಗರಿಷ್ಠ ದಾಖಲೆಯ ಲಾಭ ಸಿಕ್ಕಿದ್ದನ್ನು ತಿಳಿಸಿದರು.
ಇಂದು ಎಲ್ಲರೂ ಭಾರತದ ಸ್ನೇಹ ಬಯಸುತ್ತಾರೆ. ಹೂಡಿಕೆದಾರರು ಗರಿಷ್ಠ ಹಣ ಹೂಡುತ್ತಿದ್ದಾರೆ. ರಫ್ತಿನಲ್ಲಿ ಗಮನಾರ್ಹ ಸಾಧನೆ ನಮ್ಮದು. ವಿಶ್ವದ 11ನೇ ಆರ್ಥಿಕ ಸ್ಥಾನದಿಂದ ಇದೀಗ ನಾವು 5ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಈ ಬದಲಾವಣೆಯನ್ನು ನೀವೆಲ್ಲರೂ ನೋಡಿದ್ದೀರಿ. ಇದೆಲ್ಲವೂ 10 ವರ್ಷಗಳಲ್ಲಿ ಆಗಿದೆ ಎಂದು ವಿವರಿಸಿದರು. ಈ ಪರಿವರ್ತನೆಗೆ ಯಾರು ಕಾರಣರು ಎಂದಾಗ 'ಮೋದಿ ಮೋದಿ' ಎಂದು ಜನರು ಘೋಷಣೆ ಕೂಗಿದರು. ನಿಮ್ಮ ಒಂದು ಮತವು ಇದಕ್ಕೆ ಕಾರಣ ಎಂದು ಮೋದಿಜೀ ಅವರು ತಿಳಿಸಿದರು.

ಬೆಂಗಳೂರು ದಕ್ಷಿಣ, ಬೆಂಗಳೂರು ಮಧ್ಯ, ಬೆಂಗಳೂರು ಉತ್ತರ ಕ್ಷೇತ್ರಗಳು, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಸಭೆ ಇದಾಗಿತ್ತು. ಅಭ್ಯರ್ಥಿಗಳಾದ ಡಾ.ಮಂಜುನಾಥ್, ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್, ವಿಪಕ್ಷ ನಾಯಕ ಅಶೋಕ, ಬಿಜೆಪಿ- ಜೆಡಿಎಸ್ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಮತಯಾಚನೆ ವೇಳೆ ಬೆದರಿಕೆ ಆರೋಪ: ಡಿಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲು