Webdunia - Bharat's app for daily news and videos

Install App

ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ: ಮರದ ಅಡಿಯಲ್ಲಿ ಜಿಲ್ಲಾಧಿಕಾರಿ ಕರ್ತವ್ಯ

Sampriya
ಶುಕ್ರವಾರ, 2 ಮೇ 2025 (14:49 IST)
Photo Courtesy X
ಬೆಂಗಳೂರು : ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ಕರಾಳ ನೆನಪು ಮಾಸುವ ಮುನ್ನವೇ ಚಾಮರಾಜನಗರ ಮತ್ತು ರಾಯಚೂರು ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ ಬಂದಿದೆ. ಇಂದು ಮುಂಜಾನೆ 2.40ಕ್ಕೆ ಇ-ಮೇಲ್ ಸಂದೇಶ ಬಂದಿದೆ.

ಚಾಮರಾಜನಗರ ಜಿಲ್ಲಾಡಳಿತಕ್ಕೆ ಬಾಂಬ್ ಬೆದರಿಕೆ ಪತ್ರ ಇ-ಮೇಲ್​ನಲ್ಲಿ ಬಂದಿದೆ. ವಿಷಯ ತಿಳಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಂದ ಹೊರಗೆ ಬಂದು ನಿಂತಿದ್ದಾರೆ. ಅಧಿಕಾರಿಗಳಲ್ಲಿ ಭೀತಿ ಉಂಟಾಗಿದೆ.

ತಮಿಳುನಾಡಿನ ಬಾಂಬ್ ಬ್ಲಾಸ್ಟ್ ಪ್ರಕರಣಗಳನ್ನು ಉಲ್ಲೇಖಿಸಿ ಮೇಲ್ ಸಂದೇಶ ರವಾನೆ ಮಾಡಲಾಗಿದ್ದು, ಡಿಎಂಕೆ ನಾಯಕರ ಹೆಸರು ಉಲ್ಲೇಖಿಸಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ಪೈಪ್​ಗಳಲ್ಲಿ ಅಡಗಿಸಿಟ್ಟಿರುವ ಬಾಂಬ್​ಗಳು ಸ್ಫೋಟಗೊಳಿಸುವುದಾಗಿ ಅಪರಿಚಿತ ಸಂದೇಶ ರವಾನೆ ಮಾಡಿದ್ದಾರೆ. ಸಂದೇಶ ತಿಳಿಯುತ್ತಿದ್ದಂತೆ ಡಿಸಿ ಶಿಲ್ಪಾನಾಗ್ ಹಾಗೂ ಎಸ್ಪಿ ಡಾ.ಬಿ.ಟಿ.ಕವಿತಾ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.

ಕಚೇರಿಯಲ್ಲಿದ್ದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಹೊರಕ್ಕೆ ಕಳುಹಿಸಿ, ಜಿಲ್ಲಾಡಳಿತ ಭವನ ಆವರಣದೊಳಕ್ಕೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಲಾಗಿದೆ. ಬಾಂಬ್ ಪತ್ತೆ ದಳ ಮತ್ತು ಶ್ವಾನದಳವು ಜಿಲ್ಲಾಡಳಿತ ಭವನವನ್ನು ಜಾಲಾಡುತ್ತಿದ್ದು, ಶೋಧ ಕಾರ್ಯ ನಡೆಸುತ್ತಿದ್ದಾರೆ.

ಬಾಂಬ್ ಪತ್ತೆ ದಳ ಶೋಧ ಕಾರ್ಯ ನಡೆಸುತ್ತಿರುವ ಹಿನ್ನೆಲೆ ಜಿಲ್ಲಾಡಳಿತ ಭವನ ಆವರಣದ ಮರದ ಕೆಳಗೆ ಕುಳಿತು ಡಿಸಿ ಶಿಲ್ಪಾನಾಗ್, ಎಡಿಸಿ ಗೀತಾ ಹುಡೇದಾ ಹಾಗೂ ಜಿಪಂ ಸಿಇಒ ಮೋನಾ ರೋತ್ ಕರ್ತವ್ಯ ನಿರ್ವಹಿಸಿದ್ದು, ಗಮನ ಸೆಳೆಯಿತು‌.

ಜಿಲ್ಲಾಡಳಿತ ಭವನವನ್ನು ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಯಾರೂ ಆತಂಕಪಡುವ ಅಗತ್ಯ ಇಲ್ಲ ಎಂದು ಚಾಮರಾಜನಗರ ಡಿಸಿ ಶಿಲ್ಪಾನಾಗ್ ಹೇಳಿದ್ದಾರೆ.‌ ಸೆನ್ ಠಾಣೆಗೆ ದೂರು ನೀಡಿದ್ದೇವೆ.ರಾಜ್ಯ ಮಟ್ಟದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ನೌಕರರನ್ನು ಹೊರಗೆ ಕಳಿಸಿದ್ದೇವೆ ಎಂದರು.

 ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳ ಭವನಕ್ಕೂ ಬಾಂಬ್ ಬೆದರಿಕೆ ಈ ಮೇಲ್ ಸಂದೇಶ ಬಂದಿದೆ. ನಗರದ ಹೊರವಲಯದ ಯಕ್ಲಾಸಪುರ ಗ್ರಾಮದ ಬಳಿ ಇರುವ ಹೊಸ ಜಿಲ್ಲಾಧಿಕಾರಿ ಕಚೇರಿಯ‌ನ್ನು ಸ್ಫೋಟಗೊಳಿಸುವುದಾಗಿ ಬೆಳಿಗ್ಗೆ 6:30ರ ವೇಳೆಗೆ ರಾಯಚೂರು ಜಿಲ್ಲಾಧಿಕಾರಿಗಳ ಇ-ಮೇಲ್ ಐಡಿಗೆ ಸಂದೇಶ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿ ಅರೆಸ್ಟ್

NEET ಪರೀಕ್ಷೆ ಹೇಗಿತ್ತು ಎಂದರೆ ವಿದ್ಯಾರ್ಥಿಗಳು ಶಾಕ್ ಆಗ್ತಿದ್ದಾರೆ: ಕಾರಣ ಇಲ್ಲಿದೆ

ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

Gold price today: ಚಿನ್ನದ ದರ ಇಂದು ಮತ್ತೆ ಏರಿಕೆ, ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments