ಬೆಂಗಳೂರು : ಬೆಂಗಳೂರಿನ ಐಟಿ ಕಚೇರಿಗೆ ಯಾರೋ ಕಿಡಿಗೇಡಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಐಟಿ ಕಚೇರಿಗೆ ಬಾಂಬ್ ಇಡುವುದಾಗಿ ಬೆದರಿಕೆ ಹಾಕಿದ್ದು, ನಿನ್ನೆ ರಾತ್ರಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕಳುಹಿಸಿದ್ದಾರೆ ಎನ್ನಲಾಗಿದೆ. ಬಾಂಬ್ ಬೆದರಿಕೆಯ ಹಿನ್ನಲೆಯಲ್ಲಿ ಇದೀಗ ಐಟಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.