Publish Date: Sat, 06 Jan 2024 (16:40 IST)
Updated Date: Sat, 06 Jan 2024 (16:52 IST)
ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶುಕ್ರವಾರ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ,
ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದುMorgue999lol ಎಂಬ ಐಡಿ ಮೂಲಕ ಮೇಲ್ ಮಾಡಿದ್ದರು, ಜೊತೆಗೆ ಉಗ್ರ ಸಂಘಟೆನಯೊಂದರ ಹೆಸರನ್ನು ದುಷ್ಕರ್ಮಿಗಳು ಉಲ್ಲೇಖಿಸಿ ಬೆದರಿಕೆ ಹಾಕಿದ್ದರು. ಮ್ಯೂಸಿಯಂ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಪರಿಶೀಲನೆ ನಡೆಸಿದ್ದರು. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದಿಂದಲೂ ಪರಿಶೀಲನೆ ನಡೆಸಲಾಗಿತ್ತು. ಬಳಿಕ ಹುಸಿ ಬಾಂಬ್ ಬೆದರಿಕೆ ಎಂದು ತಿಳಿದು ಬಂತು.