Publish Date: Mon, 26 Feb 2024 (16:00 IST)
Updated Date: Mon, 26 Feb 2024 (16:07 IST)
ಬೆಂಗಳೂರು-ಬೆಳ್ಳಂಬೆಳಿಗ್ಗೆ ಬೆಂಗಳೂರಿನಲ್ಲಿ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕೆಂಗೇರಿ ಉಪನಗರದ ಹೊಯ್ಸಳ ಸರ್ಕಲ್ ಬಳಿ ಘಟನೆ ನಡೆದಿದೆ.ಬೆಂಕಿ ಕಂಡ ಸ್ಥಳೀಯರಿಂದ ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಆಗಮಿಸಿದ ಒಂದು ಅಗ್ನಿಶಾಮಕ ವಾಹನ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಶೆಡ್ ನಲ್ಲಿ ಇಡಲಾಗಿದ್ದ ಬಟ್ಟೆಗಳಿಗೆ ಬೆಂಕಿ ಬಿದ್ದಿದ್ದು ಬಟ್ಟೆಗಳು ಬೆಂಕಿಗಾವುತಿಯಾಗಿದೆ.ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಮಳಿಗೆಯನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತಾದರೂ, ಸಾಮಗ್ರಿಗಳನ್ನು ಕೊಂಡೊಯ್ದಿರಲಿಲ್ಲ.ರಸ್ತೆಯ ಬದಿಯಲ್ಲಿ ಒಣಗಿದ ಎಲೆಗಳನ್ನು ಒಟ್ಟುಗೂಡಿಸಿ ಬೆಂಕಿಯಿಟ್ಟಿದ್ದೇ ಈ ಅನಾಹುತಕ್ಕೆ ಕಾರಣವೆನ್ನಲಾಗಿದೆ. ಸಾರ್ವಜನಿಕರು ಮಳಿಗೆಗೆ ಬೆಂಕಿ ತಗಲುತ್ತಿದ್ದಂತೆಯೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.