ಇಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಬಾಗಲಕೋಟೆ ಜಿಲ್ಲಾ ಪ್ರವಾಸ ಮಾಡಲಿದ್ದಾರೆ. ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಮಾವೇಶದಲ್ಲಿ ಮಾಜಿ ಸಿಎಂ ಭಾಗಿಯಾಗಲಿದ್ದಾರೆ. ನಗರದ ಚರಂತಿಮಠ್ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 11 ಗಂಟೆಗೆ ಬಿಜೆಪಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಮಟ್ಟದ ಏಳು ವಿಧಾನಸಭಾ ಕ್ಷೇತ್ರದ ಪದಾಧಿಕಾರಿಗಳು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆ ಜಿಲ್ಲೆಯಲ್ಲಿ ಕೇಸರಿ ಪಡೆ ಆ್ಯಕ್ಟಿವ್ ಆಗುತ್ತಿದೆ. ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಮಾವೇಶದಲ್ಲಿ ಜಿಲ್ಲೆಯ ಬಿಜೆಪಿ ನಾಯಕರು, ಪ್ರಕೋಷ್ಟಗಳ ಪದಾಧಿಕಾರಿಗಳು ಸಹ ಸಭೆಯಲ್ಲಿ ಭಾಗಿಯಾಗಲಿದ್ದಾರೆ.