ಬೊಮ್ಮಾಯಿ ಸರ್ಕಾರ ಅಲಿಬಾಬಾ ಮತ್ತು 40 ಕಳ್ಳರ ಸರ್ಕಾರ : ಸಿದ್ದರಾಮಯ್ಯ

Webdunia
ಮಂಗಳವಾರ, 25 ಏಪ್ರಿಲ್ 2023 (07:33 IST)
ಬೆಳಗಾವಿ : ಬೊಮ್ಮಾಯಿ ಸರ್ಕಾರ ಅಲಿಬಾಬ ಮತ್ತು 40 ಕಳ್ಳರ ಸರ್ಕಾರ. ಬಿಜೆಪಿಯವರು ಯದ್ವಾತದ್ವಾ ಭ್ರಷ್ಟಾಚಾರ ಮಾಡಿದ್ದಾರೆ. ಬಿಜೆಪಿ ಅತ್ಯಂತ ಭ್ರಷ್ಟ ಸರ್ಕಾರ ಎಂದು ಜನರು ಬೀದಿ ಬೀದಿಗಳಲ್ಲಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಗೋಕಾಕ್ ನಗರದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾವೆಲ್ಲಾ 2013ರಲ್ಲಿ ಕಾಂಗ್ರೆಸ್ಗೆ ಆಶೀರ್ವಾದ ಮಾಡಿದ್ದಿರಿ. ನಾನು ಸಿಎಂ ಆಗಿದ್ದೆ. ನಮ್ಮ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ.

ಸಮಾಜದ ಎಲ್ಲಾ ಬಡವರಿಗೆ ಕಾರ್ಯಕ್ರಮ ಕೊಡುವ ಕೆಲಸ ಮಾಡಿದ್ದೇನೆ. ನಮ್ಮದು ನುಡಿದಂತೆ ನಡೆದ ಸರ್ಕಾರ. ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ. 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಅನ್ನಭಾಗ್ಯ, ಶೂ ಭಾಗ್ಯ, ವಿದ್ಯಾಸಿರಿ, ಮಾತೃಪೂರ್ಣ ಯೋಜನೆಗಳನ್ನು ಜಾರಿಗೆ ತಂದಿದ್ದೇನೆ. ಬಿಜೆಪಿ 2018ರಲ್ಲಿ 600 ಭರವಸೆಗಳನ್ನು ನೀಡಿತ್ತು. ಅದರಲ್ಲಿ ಕೇವಲ 50 ಭರವಸೆಗಳನ್ನು ಈಡೇರಿಸಿದೆ ಎಂದು ಟೀಕಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

85 ಮಂದಿಯಿಂದ ವಿಮಾನದಲ್ಲಿ ತಾಂತ್ರಿಕ ದೋಷ, ಆಮೇಲೆ ಏನಾಯಿತು ಗೊತ್ತಾ

ಜೋಡಿ ಕೊಲೆ ಆರೋಪಿ, ನಟೋರಿಯಸ್ ತುಕ್ಕ ನೌಫಾಲ್‌ನ ಬರ್ಬರ ಹತ್ಯೆ

ಅಕ್ಕನ ಸ್ಥಾನದಲ್ಲಿ ಪ್ರದೀಪ್‌ ಈಶ್ವರ್‌, ಪ್ರತಾಪ್ ಸಿಂಹಗೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಕಿವಿಮಾತು

ಮುಂದಿನ ಸುದ್ದಿ
Show comments