Daily Horoscope
✕

ಬೊಮ್ಮಾಯಿಗೆ ಮತ್ತೆ ಕೊರೊನಾ ಸೋಂಕು ದೃಢ

Webdunia
ಶನಿವಾರ, 6 ಆಗಸ್ಟ್ 2022 (07:46 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ದೆಹಲಿ ಪ್ರವಾಸ ರದ್ದಾಗಿದೆ.

ಈ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಹೇಳಿದ್ದಾರೆ. 

ಆಜಾದಿ ಕಾ ಅಮೃತ ಮಹೋತ್ಸವ ಕುರಿತ ಸಭೆ ಮತ್ತು ನೀತಿ ಆಯೋಗದ ಸಭೆಗಳಲ್ಲಿ ಭಾಗವಹಿಸಬೇಕಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಂಡಿದ್ದರು.

ಇಂದು ಬೆಳಗ್ಗೆ 11.30ಕ್ಕೆ ಬೆಂಗಳೂರಿನಿಂದ ಹೊರಡಬೇಕಿತ್ತು. ಆಗಸ್ಟ್ 7ರಂದು ದೆಹಲಿಯಿಂದ ಹಿಂದಿರುಗಲು ಕಾರ್ಯಸೂಚಿ ನಿಗದಿಯಾಗಿತ್ತು. ಅಷ್ಟರಲ್ಲೇ ಕೊರೊನಾ ಕಾಣಿಸಿಕೊಂಡಿದ್ದು, ದೆಹಲಿ ಪ್ರವಾಸ ರದ್ದಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮ್ಮ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದವರು ಯಾರು ಎಂದು ಕೊನೆಗೂ ಬಾಯ್ಬಿಟ್ಟ ಸಿದ್ದರಾಮಯ್ಯ

ಮರೆಗುಳಿ ಕುಮಾರಣ್ಣ ದಸರಾ ಪುಷ್ಪಾರ್ಚನೆ ಮಾಡುವಾಗ ನಿಮ್ಮ ವೈಫ್ ನಿಮ್ಮ ಜೊತೆಗಿದ್ರು: ಕುಮಾರಸ್ವಾಮಿಗೆ ಕಾಂಗ್ರೆಸ್ ಟಾಂಗ್

ಸ್ಟಿಂಜ್ ಆಪರೇಷನ್ ಮುಚ್ಚಿಡಲು ನಡೆದ ಹುನ್ನಾರ: ಶಾಕಿಂಗ್ ವಿಚಾರ ಹೇಳಿದ ಎಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದ್ದು ಯಾರು, ಯಾಕೆ: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಯತೀಂದ್ರ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಮುಂದಿನ ಸುದ್ದಿ
Show comments