Publish Date: Wed, 04 May 2022 (17:55 IST)
Updated Date: Wed, 04 May 2022 (17:58 IST)
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಾರಿಗೆ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದು, ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ವರಿಷ್ಠರು ನಿರ್ಧರಿಸಲಿದ್ದಾರೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವರಿಷ್ಠರು, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತು ಶಾಸಕ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ರಾಮುಲು, ಸಿಎಂ ಬಸವರಾಜ ಬೊಮ್ಮಾಯಿ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಜನಪರ ಕೆಲಸ ಮಾಡುತ್ತಿದ್ದಾರೆ. 2023 ರಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ ಎಂದು ಹೇಳಿದ್ದಾರೆ.