ಬೆಂಗಳೂರು : ಗಡಿಭಾಗದಲ್ಲಿ ಶಿಕ್ಷಣ, ಕೈಗಾರಿಕೆ, ಮೂಲಭೂತ ಸೌಕರ್ಯ, ಕನ್ನಡ ಭಾಷಾ ಅಭಿವೃದ್ಧಿಗಳ ಬಗ್ಗೆ ಕೆಲಸ ಮಾಡುವ ಅವಶ್ಯಕತೆ ಇದ್ದು,
ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಇದೇ ವರ್ಷದ ಮಾರ್ಚ್ 31ರೊಳಗೆ 100 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಈ ಅನುದಾನಕ್ಕೆ ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ ಸಲ್ಲಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿರುವ ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅವರು, ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಈಗಾಗಲೇ 25 ಕೋಟಿ ರೂ. ನೀಡಲಾಗಿದೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!